ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ತಲಪಾಡಿಯಲ್ಲಿ ಪಾದಚಾರಿಗೆ ಕಾರು ಡಿಕ್ಕಿ; ಗಂಭೀರ ಗಾಯ

ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಲಪಾಡಿಯಲ್ಲಿ ನಡೆದಿದೆ.

ಗದಗ ನಿವಾಸಿ ಶರಣಪ್ಪ ಗಂಭೀರ ಗಾಯಗೊಂಡವರು. ರಸ್ತೆ ಬದಿಯಲ್ಲಿ ನಿಂತಿದ್ದ ಶರಣಪ್ಪ ಅವರಿಗೆ ಕೇರಳ ನೋಂದಣಿಯ ಕಾರು ಚಾಲಕ ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ಕಾರು ಚಲಾಯಿಸಿ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.

ಡಿಕ್ಕಿಯ ಪರಿಣಾಮ ಶರಣಪ್ಪ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ತಲಪಾಡಿಯಲ್ಲಿ ಸರ್ವಿಸ್ ರಸ್ತೆ ಇಲ್ಲದಿರುವುದು ಒಂದೆಡೆಯಾದರೆ, ಮತ್ತೊಂದೆಡೆ ವಾಹನಗಳು ಹಾಗೂ ಲಾರಿಗಳನ್ನು ರಸ್ತೆಯಲ್ಲೇ ನಿಲ್ಲಿಸುತ್ತಿರುವುದರಿಂದ ಪಾದಚಾರಿಗಳಿಗೆ ಸಂಚರಿಸಲು ಸ್ಥಳಾವಕಾಶವಿಲ್ಲದಂತಾಗಿದೆ. ಇದರಿಂದ ಅಪಘಾತದ ಅಪಾಯ ಹೆಚ್ಚಾಗುತ್ತಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಪಾದಚಾರಿಗಳ ಸುರಕ್ಷತೆ ದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಘಟನೆ ಕುರಿತು ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!