ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಕೋಚಿಂಗ್ ಸೆಂಟರ್‌ನ ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದ ದುರಂತ ಮಾಸುವ ಮುನ್ನವೇ, ಗಲ್ಫ್‌ನಿಂದ ಮಂಗಳೂರಿಗೆ ವಾಪಸಾಗಿದ್ದ ಆಕೆಯ ಸಹೋದರ ಲಾಡ್ಜ್‌ವೊಂದರಲ್ಲಿ ಶವವಾಗಿ ಪತ್ತೆಯಾದ ದಾರುಣ ಘಟನೆ ನಡೆದಿದೆ.

ಕೇರಳದ ಬೇಕಲ್‌ನ ಪಳ್ಳಿಕ್ಕರ ಮುಕೂಡ್ ನಿವಾಸಿ ಮಹೇಶ್ ಅವರ ಪುತ್ರ ಅರ್ಜುನ್ ಮಹೇಶ್ ಮೃತರು. ಕಳೆದ ಜೂನ್‌ನಲ್ಲಿ ಅರ್ಜುನ್ ಅವರ ಸಹೋದರಿ ಐಜಾ ಆರ್. ಮಹೇಶ್ ಅವರು ಕೋಚಿಂಗ್ ಸೆಂಟರ್‌ನ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಗೊಂದಲದ ಬಳಿಕ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ಐಜಾ ತೀವ್ರ ಮಾನಸಿಕ ಒತ್ತಡದಲ್ಲಿದ್ದರು ಎನ್ನಲಾಗಿತ್ತು.

ತಂಗಿಯ ಸಾವಿನ ಸುದ್ದಿ ತಿಳಿದು ಗಲ್ಫ್‌ನಿಂದ ಮನೆಗೆ ಬಂದಿದ್ದ ಅರ್ಜುನ್ ಬಳಿಕ ಮತ್ತೆ ಉದ್ಯೋಗಕ್ಕಾಗಿ ಗಲ್ಫ್‌ಗೆ ತೆರಳಿದ್ದರು. ಭಾನುವಾರ ವಿಮಾನದ ಮೂಲಕ ಮಂಗಳೂರಿಗೆ ಬಂದಿಳಿದ ಅವರು, ಮನೆಗೆ ವಾಪಸಾಗುತ್ತಿರುವುದಾಗಿ ಸ್ನೇಹಿತರಿಗೆ ತಿಳಿಸಿದ್ದರು. ಅದೇ ದಿನ ಮಧ್ಯಾಹ್ನ ತಾಯಿಗೂ ಕರೆ ಮಾಡಿದ್ದರು ಎನ್ನಲಾಗಿದೆ.

ಬಳಿಕ ಅರ್ಜುನ್ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದರಿಂದ ಆತಂಕಗೊಂಡ ಕುಟುಂಬಸ್ಥರು ಮಂಗಳೂರಿಗೆ ಆಗಮಿಸಿ ಹುಡುಕಾಟ ನಡೆಸಿದ್ದರು. ಈ ವೇಳೆ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಮರವೂರಿನ ಲಾಡ್ಜ್‌ವೊಂದರಲ್ಲಿ ಅರ್ಜುನ್ ಶವವಾಗಿ ಪತ್ತೆಯಾಗಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಬಜ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಒಂದೇ ಕುಟುಂಬದ ಇಬ್ಬರು ಯುವ ಮಕ್ಕಳು ಅಲ್ಪಾವಧಿಯಲ್ಲೇ ಮೃತಪಟ್ಟಿರುವುದು ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ. ಘಟನೆಗೆ ನಿಖರ ಕಾರಣವೇನು ಎಂಬುದರ ಕುರಿತು ಬಜ್ಪೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!