ಜನ ಮನದ ನಾಡಿ ಮಿಡಿತ

Advertisement

ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಹಾಗೂ ಇರುವೈಲು ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರ ಅಮಾನತು ಆದೇಶವನ್ನು ರದ್ದುಗೊಳಿಸಿ – ಶಾಸಕ ಕೋಟ್ಯಾನ್

ದಕ್ಷಿಣ ಕನ್ನಡ :  ಮೂಡುಬಿದಿರೆ ತಾಲೂಕು ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ದಯಾವತಿ ಹಾಗೂ ಇರುವೈಲು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕಾಂತಪ್ಪರನ್ನು ಅಮಾನತುಗೊಳಿಸಿರುವುದಾಗಿ ತಿಳಿದುಬಂದಿದೆ.ಇರುವೈಲು ಗ್ರಾಮ ಪಂಚಾಯತ್‌ಗಾಗಿ ನಿರ್ಮಿಸಲಾದ ರಾಜೀವ್ ಗಾಂಧಿ ಸೇವಾ ಕೇಂದ್ರ ಹಾಗೂ ನೂತನ ಪಂಚಾಯತ್ ಕಚೇರಿ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಅತಿಥಿಗಳನ್ನು ಆಹ್ವಾನಿಸುವಾಗ ಪ್ರೊಟೊಕಾಲ್ ಪಾಲಿಸಿಲ್ಲ ಎಂಬ ಕಾರಣವೊಡ್ಡಿ ಅಮಾನತು ಮಾಡಿರುವುದಾಗಿ ಹೇಳಲಾಗುತ್ತಿದ್ದು, ಸಾರ್ವಜನಿಕರು ಇದೊಂದು ರಾಜಕೀಯ ನಾಟಕ ಎನ್ನುತ್ತಿದ್ದಾರೆ, ಜನರ ತೆರಿಗೆ ದುಡ್ಡಿನಿಂದ ಜನಪ್ರತಿನಿಧಿಗಳ  ನೇತೃತ್ವದಲ್ಲಿ ಆಡಳಿತ ನಡೆಸಲು ನಾವೇ ಆರಿಸಿ ಕಳುಹಿಸಿದ ಜನಪ್ರತಿನಿಧಿಗಳ ಜೊತೆ ಸಮನ್ವಯತೆ ಇಲ್ಲದಿರುವುದು ಮೂಲ ಕಾರಣವಾಗಿದ್ದು, ಇದೊಂದು ರಾಜಕೀಯ ಪ್ರೇರಿತ ಪ್ರಹಸನ  ಇದಕ್ಕೆ ಅಧಿಕಾರಿಗಳನ್ನು ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ.

    ಕಾರಣವಿಲ್ಲದೆ ಅಮಾನತು ಮಾಡಿರುವ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಹಾಗೂ ಇರುವೈಲು ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರ ಅಮಾನತು ಆದೇಶವನ್ನು ಕೂಡಲೇ ಹಿಂಪಡೆದುಕೊಳ್ಳದಿದ್ದಲ್ಲಿ ಜಿಲ್ಲಾಡಳಿತದ ಮುಂದೆ ಸಮಾನ ಮನಸ್ಕ ಶಾಸಕರು ಹಾಗೂ ಜನಪ್ರತಿನಿಧಿಗಳೊಂದಿಗೆ ಸೇರಿ ಜಿಲ್ಲಾಡಳಿತದ ಮುಂದೆ ಸತ್ಯಾಗ್ರಹ ಪ್ರತಿಭಟನೆ ನಡೆಸುವುದಾಗಿ ಮೂಡುಬಿದಿರೆ ಶಾಸಕ ಉಮಾನಾಥ ಎ. ಕೋಟ್ಯಾನ್ ಎಚ್ಚರಿಸಿದ್ದಾರೆ.

ಮೂಡುಬಿದಿರೆ ಶಾಸಕರ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಜಿಲ್ಲಾ ಮಟ್ಟದ ಅಧಿಕಾರಿಗಳು ಈ ವಿಷಯದಲ್ಲಿ ಉತ್ತರ ಕೊಡಲು ನುಣುಚಿಕೊಳ್ಳುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಈರ್ವರು ಅಧಿಕಾರಿಗಳ ಅಮಾನತನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಶಾಸಕ ಕೋಟ್ಯಾನ್ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.
ಇರುವೈಲು ಪಂಚಾಯತು ಅಧ್ಯಕ್ಷ ವಲೇರಿಯನ್ ಕುಟಿನ್ಹ, ಸದಸ್ಯರಾದ ರಝಾಕ್, ಪ್ರವೀಣ್ ಶೆಟ್ಟಿ, ಜಯಶಂಕರ್, ನಾಗೇಶ್ ಅಮೀನ್, ನವೀನ್, ಉಷಾ, ಮೋಹಿನಿ, ಲಲಿತಾ, ರುಕ್ಮಿಣಿ, ಕುಸುಮಾ, ನವ್ಯ ಪತ್ರಿಕಾಗೋಷ್ಠಿಯಲ್ಲಿ  ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!