ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಐದನೇ ತರಗತಿ ವಿದ್ಯಾರ್ಥಿ ಮನ್ವಿತ್, ಸಂಭವಿಸಬಹುದಾಗಿದ್ದ ದೊಡ್ಡ ಅವಘಡವನ್ನು ತಪ್ಪಿಸಿ ಪ್ರಶಂಸೆಗೆ ಪಾತ್ರನಾಗಿದ್ದಾನೆ.

ಶಾಲೆಯ ಅಕ್ಷರ ದಾಸೋಹದ ಸಿಬ್ಬಂದಿ ಎಂದಿನಂತೆ ಕೆಲಸದಲ್ಲಿ ನಿರತರಾಗಿದ್ದ ವೇಳೆ ವಿದ್ಯುತ್ ಚಾಲಿತ ತುರಿಮಣೆ ಬಳಿ ಆಕಸ್ಮಿಕವಾಗಿ ಅವರ ಕೈಬೆರಳು ಸಿಲುಕಿಕೊಂಡಿದೆ. ನೋವಿನಿಂದ ಅವರು ಕಿರುಚಿಕೊಂಡಾಗ, ಶಾಲಾ ಅಂಗಳದಲ್ಲಿ ಆಟವಾಡುತ್ತಿದ್ದ ಮನ್ವಿತ್ ತಕ್ಷಣ ಸ್ಥಳಕ್ಕೆ ಧಾವಿಸಿದ್ದಾನೆ.

ಪರಿಸ್ಥಿತಿಯನ್ನು ಅರಿತುಕೊಂಡ ಬಾಲಕ ಯಾವುದೇ ಸೂಚನೆಗಾಗಿ ಕಾಯದೆ ಕೂಡಲೇ ವಿದ್ಯುತ್ ಸಂಪರ್ಕ ಕಡಿತಗೊಳಿಸಿ, ಹೆಚ್ಚಿನ ಅನಾಹುತ ಸಂಭವಿಸುವುದನ್ನು ತಪ್ಪಿಸಿದ್ದಾನೆ.

ಸ್ವಯಂ ನಿರ್ಧಾರದಿಂದ ಸಮಯಪ್ರಜ್ಞೆ ಮೆರೆದ ಬಾಲಕನ ಧೈರ್ಯ ಹಾಗೂ ಬುದ್ಧಿವಂತಿಕೆಗೆ ಶಾಲಾ ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಅಂಚನ್ ಹಾಗೂ ಸದಸ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಘಟನೆಯ ಹಿನ್ನೆಲೆಯಲ್ಲಿ ಶಾಲೆಗೆ ಭೇಟಿ ನೀಡಿದ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ನೋಣಯ್ಯ ನಾಯ್ಕ್ ಹಾಗೂ ಸಿಆರ್‌ಪಿ ಜ್ಯೋತಿ ಅವರು ಬಾಲಕ ಮನ್ವಿತ್‌ನ ಸಮಯಪ್ರಜ್ಞೆಯನ್ನು ಶ್ಲಾಘಿಸಿ, ಆತನ ಧೈರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಣ್ಣ ವಯಸ್ಸಿನಲ್ಲೇ ಪರಿಸ್ಥಿತಿಯನ್ನು ಅರಿತು ತಕ್ಷಣ ಸೂಕ್ತ ನಿರ್ಧಾರ ಕೈಗೊಂಡ ಮನ್ವಿತ್‌ನ ಸಮಯಪ್ರಜ್ಞೆ ಇದೀಗ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!