ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಂಗಳೂರಿನ ಶೆಟ್ಟಿ ಟ್ರೇಡರ್ಸ್ ಮಾಲಕ ಧರ್ಮೇಂದ್ರ ಶೆಟ್ಟಿ ನಿಧನ

ಮಂಗಳೂರಿನ ಹೆಸರಾಂತ ಶೆಟ್ಟಿ ಟ್ರೇಡರ್ಸ್ ಸಂಸ್ಥೆಯ ಮಾಲಕ ಹಾಗೂ ಉದ್ಯಮಿ ಧರ್ಮೇಂದ್ರ ಶೆಟ್ಟಿ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.

ವ್ಯಾಪಾರ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಧರ್ಮೇಂದ್ರ ಶೆಟ್ಟಿ ಅವರು ಸಮಾಜಮುಖಿ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಯುವಕರೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿದ್ದ ಅವರು, ಹಲವಾರು ಯುವಕರ ಪ್ರೀತಿ, ವಿಶ್ವಾಸ ಹಾಗೂ ಗೌರವಕ್ಕೆ ಪಾತ್ರರಾಗಿದ್ದರು.

ಬಹರೈನ್‌ನಲ್ಲಿಯೂ ಹಲವು ವರ್ಷಗಳ ಕಾಲ ವ್ಯವಹಾರ ನಡೆಸಿದ್ದ ಧರ್ಮೇಂದ್ರ ಶೆಟ್ಟಿ ಅವರು, ಬಳಿಕ ಅನಾರೋಗ್ಯದ ಹಿನ್ನೆಲೆಯಲ್ಲಿ ತಾಯ್ನಾಡಿಗೆ ಮರಳಿದ್ದರು ಎನ್ನಲಾಗಿದೆ.

ಅವರ ನಿಧನಕ್ಕೆ ಸಚಿವರಾದ ಯು.ಟಿ. ಖಾದರ್, ಇಫ್ತಿಕಾರ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಧರ್ಮೇಂದ್ರ ಶೆಟ್ಟಿ ಅವರ ಅಗಲಿಕೆಯಿಂದ ವ್ಯಾಪಾರ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಆಪ್ತರು ಮತ್ತು ಅಭಿಮಾನಿಗಳು ದುಃಖ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!