ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ಫಿಲೋ ಆಟಿದ ಕೂಟ’ ಸಂಭ್ರಮ

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ ‘ಫಿಲೋ ಆಟಿದ ಕೂಟ’ ಕಾರ್ಯಕ್ರಮವು ಕಾಲೇಜಿನ ರಜತ ಮಹೋತ್ಸವ ಸ್ಮಾರಕ ಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ‘ತುಳುನಾಡ ಮಾಣಿಕ್ಯ’ ಅರವಿಂದ್ ಬೋಳಾರ್ ಮಾತನಾಡಿ, ಕಾಲೇಜಿನಲ್ಲಿ ಇಂತಹ ಸಾಂಸ್ಕೃತಿಕ ಆಚರಣೆಗಳನ್ನು ಆಯೋಜಿಸುವುದರಿಂದ ವಿದ್ಯಾರ್ಥಿಗಳಿಗೆ ತುಳುನಾಡಿನ ಸಂಸ್ಕೃತಿ ಹಾಗೂ ಪರಂಪರೆಯ ಪರಿಚಯವಾಗುತ್ತದೆ ಎಂದು ಹೇಳಿದರು.

“ನಮ್ಮ ಸಂಸ್ಕೃತಿಯ ವಾರಸುದಾರರಾಗಿ ವಿದ್ಯಾರ್ಥಿಗಳು ಮುಂದಿನ ಪೀಳಿಗೆಗೆ ಈ ಪರಂಪರೆಯನ್ನು ಕೊಂಡೊಯ್ಯುವ ಕೆಲಸ ಮಾಡಬೇಕು” ಎಂದು ಅವರು ಕರೆ ನೀಡಿದರು.

ನಮ್ಮ ಸಂಸ್ಕೃತಿಯ ಮೂಲವೇ ತಂದೆ-ತಾಯಿಗೆ ನೀಡುವ ಗೌರವ. ವಿದ್ಯಾರ್ಥಿಗಳು ತಮ್ಮ ಕರ್ತವ್ಯವನ್ನು ಅರಿತು, ಉತ್ತಮ ನಡತೆಯನ್ನು ರೂಢಿಸಿಕೊಂಡು ವಿದ್ಯಾಭ್ಯಾಸದಲ್ಲಿ ಮುನ್ನಡೆದು ಜೀವನದಲ್ಲಿ ಉತ್ತಮ ಸ್ಥಾನಮಾನ ಪಡೆಯಬೇಕು ಎಂದು ಅರವಿಂದ್ ಬೋಳಾರ್ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತುಳುನಾಡಿನ ಆಚಾರ-ವಿಚಾರ, ಸಂಪ್ರದಾಯ ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಪ್ರತಿಬಿಂಬಿಸುವ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿ ‘ಆಟಿದ ಕೂಟ’ದ ಸಂಭ್ರಮವನ್ನು ಹೆಚ್ಚಿಸಿದರು.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!