ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ವಿದ್ಯುತ್ ತುರಿಮಣೆಯಲ್ಲಿ ಸಿಲುಕಿದ ಸಿಬ್ಬಂದಿ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ವಿದ್ಯಾರ್ಥಿ

ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಸಮಯಪ್ರಜ್ಞೆ ಹಾಗೂ ಧೈರ್ಯದಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವನ್ನು ತಪ್ಪಿಸಿ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.

ಶಾಲೆಯ ಅಕ್ಷರ ದಾಸೋಹ ಸಿಬ್ಬಂದಿ ಎಂದಿನಂತೆ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಆಕಸ್ಮಿಕವಾಗಿ ಕೈಬೆರಳು ಸಿಲುಕಿಕೊಂಡಿದೆ. ನೋವಿನಿಂದ ಸಿಬ್ಬಂದಿ ಕಿರುಚಿಕೊಂಡಾಗ, ಶಾಲಾ ಅಂಗಳದಲ್ಲಿ ಆಟವಾಡುತ್ತಿದ್ದ 5ನೇ ತರಗತಿ ವಿದ್ಯಾರ್ಥಿ ಮನ್ವಿತ್ ತಕ್ಷಣ ಸ್ಥಳಕ್ಕೆ ಧಾವಿಸಿದ್ದಾನೆ.

ಪರಿಸ್ಥಿತಿಯನ್ನು ಅರಿತ ಮನ್ವಿತ್ ಯಾವುದೇ ತಡಮಾಡದೆ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದು, ಸಿಬ್ಬಂದಿಗೆ ಮತ್ತಷ್ಟು ಅಪಾಯವಾಗುವುದನ್ನು ತಪ್ಪಿಸಿದ್ದಾನೆ. ಬಾಲಕನ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

ಮನ್ವಿತ್‌ನ ಧೈರ್ಯ, ಸಮಯಪ್ರಜ್ಞೆ ಹಾಗೂ ಸ್ವಯಂ ನಿರ್ಧಾರವನ್ನು ಶಾಲಾ ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಅಂಚನ್ ಹಾಗೂ ಸದಸ್ಯರು ಶ್ಲಾಘಿಸಿದ್ದಾರೆ.

ಬಾಲಕನ ಕಾರ್ಯವನ್ನು ಅಭಿನಂದಿಸಲು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ನೋಣಯ್ಯ ನಾಯ್ಕ್ ಹಾಗೂ ಸಿಆರ್‌ಪಿ ಜ್ಯೋತಿ ಶಾಲೆಗೆ ಭೇಟಿ ನೀಡಿ ಮನ್ವಿತ್‌ನ ಸಮಯಪ್ರಜ್ಞೆ ಮತ್ತು ಧೈರ್ಯವನ್ನು ಮೆಚ್ಚಿ ಅಭಿನಂದಿಸಿದರು.

ಚಿಕ್ಕ ವಯಸ್ಸಿನಲ್ಲೇ ಸಮಯೋಚಿತ ನಿರ್ಧಾರ ಕೈಗೊಂಡ ಮನ್ವಿತ್ ಇದೀಗ ಶಾಲೆಯಲ್ಲಷ್ಟೇ ಅಲ್ಲದೆ, ಸಾರ್ವಜನಿಕ ವಲಯದಲ್ಲೂ ಪ್ರಶಂಸೆಗೆ ಪಾತ್ರನಾಗಿದ್ದಾನೆ.

Leave a Reply

Your email address will not be published. Required fields are marked *

ಮಂಗಳೂರು: ಕಪ್ಪೆಟ್ಟುವಿನಲ್ಲಿ ಅಂಬೇಡ್ಕರ್ ಕಲಾಕೃತಿ, ಪುರಾತನ ಸಂಸತ್ ಭವನದ ಮಾದರಿ

ಉಡುಪಿ: ಉಡುಪಿಯಲ್ಲಿ ಆ.15ರಂದು ‘ಆಟಿಡೊಂಜಿ ವಿಪ್ರಕೂಟ’ ಸಾಂಸ್ಕೃತಿಕ ಹಬ್ಬ..!

ಉಡುಪಿ: ಮಾದಕ ದ್ರವ್ಯ ಪ್ರಕರಣ: ಉಡುಪಿಯಲ್ಲಿ ಆರೋಪಿಯ ಬಂಧನ

ಪುತ್ತೂರು: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ಫಿಲೋ ಆಟಿದ ಕೂಟ’ ಸಂಭ್ರಮ

ಮಂಗಳೂರು: ಮಂಗಳೂರಿನ ಶೆಟ್ಟಿ ಟ್ರೇಡರ್ಸ್ ಮಾಲಕ ಧರ್ಮೇಂದ್ರ ಶೆಟ್ಟಿ ನಿಧನ

ಬಂಟ್ವಾಳ: ಯಕ್ಷಸಿರಿ ಪ್ರಶಸ್ತಿಗೆ ದುರ್ಗಾಪರಮೇಶ್ವರಿ ಕುಕ್ಕಿಲ ಆಯ್ಕೆ

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

error: Content is protected !!