ಜನ ಮನದ ನಾಡಿ ಮಿಡಿತ

Advertisement

ಕಲ್ಲಡ್ಕ: ಅಲ್ ಬಿರ್ರ್ ಶಾಲೆಗೆ ವಾಹನ, ಸಾರ್ವಜನಿಕ ಸೇವೆಗೆ ಅಂಬುಲೆನ್ಸ್ ಕೊಡುಗೆ…!

ಬಹಾದ್ದೂರ್ ಗ್ರೂಪ್ ಆಫ್ ಕಂಪೆನಿ ಹಾಗೂ ಬಹಾದ್ದೂರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಲ್ಲಡ್ಕ ಮುಹಿಯುದ್ದೀನ್ ಜುಮಾ ಮಸೀದಿ ಅಧೀನದ ಅಲ್ ಬಿರ್ರ್ ಶಾಲೆಗೆ ಟಾಟಾ ಮ್ಯಾಜಿಕ್ ಮಿನಿ ವ್ಯಾನ್ ಹಾಗೂ ಸಾರ್ವಜನಿಕ ಸೇವೆಗಾಗಿ ಅಂಬುಲೆನ್ಸ್ ಕೊಡುಗೆಯಾಗಿ ನೀಡಲಾಗಿದೆ.

ಕಲ್ಲಡ್ಕ ಮಸೀದಿ ವಠಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎರಡೂ ವಾಹನಗಳನ್ನು ಲೋಕಾರ್ಪಣೆಗೊಳಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಲ್ಲಡ್ಕ ಮುಹಿಯುದ್ದೀನ್ ಜುಮಾ ಮಸೀದಿ ಖತೀಬ್ ಸಯ್ಯಿದ್ ಅಲಿ ಮನ್ನಾನಿ, ದಾನ-ಧರ್ಮವು ಮಾನವನ ಸಂಕಷ್ಟಗಳಿಗೆ ಪರಿಹಾರವಾಗಿದ್ದು, ಪ್ರತಿಯೊಬ್ಬರೂ ತಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಸಮಾಜ ಸೇವೆ ಮಾಡುವ ಮೂಲಕ ಜೀವನವನ್ನು ಪಾವನಗೊಳಿಸಬೇಕು ಎಂದು ಕರೆ ನೀಡಿದರು.

ಮಸೀದಿ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಪನಾಮಾ ಮಾತನಾಡಿ, ಪ್ರಸಕ್ತ ವರ್ಷ ಅಲ್ ಬಿರ್ರ್ ಶಾಲೆ ಆರಂಭವಾಗಿದ್ದು, ಶಾಲಾ ವಾಹನದ ಅಗತ್ಯತೆ ಕುರಿತು ಝೈನುಲ್ ಆಬಿದ್ ಅವರನ್ನು ಸಂಪರ್ಕಿಸಿದಾಗ ತಕ್ಷಣ ಸ್ಪಂದಿಸಿದ್ದಾರೆ. ಅಲ್ಲದೆ, ಜಾತಿ-ಧರ್ಮದ ಭೇದವಿಲ್ಲದೆ ಕಲ್ಲಡ್ಕದ ಎಲ್ಲಾ ನಾಗರಿಕರ ತುರ್ತು ಚಿಕಿತ್ಸೆಗೆ ನೆರವಾಗುವ ಉದ್ದೇಶದಿಂದ ಅಂಬುಲೆನ್ಸ್‌ನ್ನೂ ಕೊಡುಗೆಯಾಗಿ ನೀಡಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಸೀದಿ ಉಪಾಧ್ಯಕ್ಷ ಅಬೂಬಕ್ಕರ್ ಮುರಬೈಲ್, ಕೋಶಾಧಿಕಾರಿ ಜವಾಝ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!