ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕನಪಾದೆ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ…!

ಪೂಜ್ಯಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಬಂಟ್ವಾಳ ತಾಲೂಕು ನಾವೂರು ಬಿ ಒಕ್ಕೂಟದ ವತಿಯಿಂದ ಕನಪಾದೆ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ದೈವಸ್ಥಾನದ ಪರಿಸರವನ್ನು ಸ್ವಚ್ಛ ಹಾಗೂ ಅಚ್ಚುಕಟ್ಟಾಗಿ ಇಡುವ ಉದ್ದೇಶದಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಒಕ್ಕೂಟದ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ದೈವಸ್ಥಾನದ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸಿದರು.

ದೈವಸ್ಥಾನದ ಪರಿಸರದಲ್ಲಿ ಸಂಗ್ರಹವಾಗಿದ್ದ ಕಸ, ಕಡ್ಡಿ ಹಾಗೂ ಇತರ ತ್ಯಾಜ್ಯಗಳನ್ನು ತೆರವುಗೊಳಿಸಿ ಸ್ವಚ್ಛತೆಗೆ ಆದ್ಯತೆ ನೀಡಲಾಯಿತು.

ಸಾರ್ವಜನಿಕ ಹಾಗೂ ಧಾರ್ಮಿಕ ಸ್ಥಳಗಳ ಸ್ವಚ್ಛತೆ ಕಾಪಾಡುವ ಮೂಲಕ ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂಬ ಸಂದೇಶವನ್ನು ಕಾರ್ಯಕ್ರಮದ ಮೂಲಕ ನೀಡಲಾಯಿತು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿವಿಧ ಸಂಘಗಳ ಸದಸ್ಯರು ಒಗ್ಗೂಡಿ ಸ್ವಯಂಪ್ರೇರಿತವಾಗಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡರು.

ಕಾರ್ಯಕ್ರಮದಲ್ಲಿ ಯೋಜನೆಯ ಮೇಲ್ವಿಚಾರಕ ನಾಗರಾಜ್, ಸೇವಾ ಪ್ರತಿನಿಧಿ ಸುನಿತಾ, ನಾವೂರು ಬಿ ಒಕ್ಕೂಟದ ಅಧ್ಯಕ್ಷ ಸದಾನಂದ ಹಳೆಗೇಟು ಸೇರಿದಂತೆ ವಿವಿಧ ಸಂಘಗಳ ಸದಸ್ಯರು ಉಪಸ್ಥಿತರಿದ್ದು, ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!