ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮನೆಯಲ್ಲಿ ಒಂಟಿಯಾಗಿದ್ದ 82 ವರ್ಷದ ವೃದ್ಧೆಯ ಚಿನ್ನದ ಬಳೆ ದೋಚಿ ಪರಾರಿ..!

ಮನೆಯಲ್ಲಿ ಒಬ್ಬರೇ ಇದ್ದ 82 ವರ್ಷದ ವೃದ್ಧೆಯ ಕೈಯಲ್ಲಿದ್ದ ಸುಮಾರು ₹5 ಲಕ್ಷ ಮೌಲ್ಯದ ಚಿನ್ನದ ಬಳೆಗಳನ್ನು ಅಪರಿಚಿತ ವ್ಯಕ್ತಿಯೊಬ್ಬ ಬಲವಂತವಾಗಿ ಎಳೆದುಕೊಂಡು ಪರಾರಿಯಾಗಿರುವ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕಕಜೆಕಾರು ಗ್ರಾಮದ ಉದ್ದದ ಗುಡ್ಡೆಯಲ್ಲಿ ನಡೆದಿದೆ.

ಉದ್ದದ ಗುಡ್ಡೆ ನಿವಾಸಿ ಅವ್ವಮ್ಮ ಅವರು ಮನೆಯಲ್ಲಿ ಒಬ್ಬರೇ ಇದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಮನೆಯೊಳಗೆ ಪ್ರವೇಶಿಸಿದ್ದಾನೆ. ಬಳಿಕ ಅವರ ಎರಡೂ ಕೈಗಳಲ್ಲಿದ್ದ ಸುಮಾರು 40 ಗ್ರಾಂ ತೂಕದ ಎರಡು ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದುಕೊಂಡು ಪರಾರಿಯಾಗಿದ್ದಾನೆ.

ಬಳೆಗಳನ್ನು ಎಳೆಯುವ ಸಂದರ್ಭದಲ್ಲಿ ವೃದ್ಧೆಯ ಎಡಕೈಗೆ ರಕ್ತಗಾಯವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಅವ್ವಮ್ಮ ಅವರ ಪುತ್ರ ಸಾದಿಕ್ ನೀಡಿದ ದೂರಿನ ಆಧಾರದ ಮೇಲೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ 2023ರ ಕಲಂ 309ರ ಅಡಿಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!