ಫರಂಗಿಪೇಟೆ ಮುಹಿಯುದ್ದೀನ್ ಕೇಂದ್ರ ಜುಮಾ ಮಸೀದಿ ಅಧೀನದ ಇಸ್ಲಾಹುಲ್ ಮುಸ್ಲಿಮೀನ್ ಮದ್ರಸದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಫರಂಗಿಪೇಟೆಯಲ್ಲಿ ನಡೆಯಿತು.

ಬಹು. ಸಯ್ಯದುಲ್ ಉಲಮಾ ಸಯ್ಯದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಙಳ್ ಅವರು ನೂತನ ಮದ್ರಸ ಕಟ್ಟಡವನ್ನು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಆಧುನಿಕತೆಯ ವೇಗದ ಬದಲಾವಣೆಗಳಿಗೆ ಅನುಗುಣವಾಗಿ ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು ಎಂದು ಹೇಳಿದರು. ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿರುವ ಇಂದಿನ ಸಂದರ್ಭದಲ್ಲಿ ಧಾರ್ಮಿಕ ಶಿಕ್ಷಣದ ಜತೆಗೆ ಉತ್ತಮ ಲೌಕಿಕ ಶಿಕ್ಷಣಕ್ಕೂ ಆದ್ಯತೆ ನೀಡುವ ಅಗತ್ಯವಿದೆ ಎಂದು ಅವರು ತಿಳಿಸಿದರು.



