ಜನ ಮನದ ನಾಡಿ ಮಿಡಿತ

Advertisement

ದೆಹಲಿ: ದೆಹಲಿಯಲ್ಲಿ ರಸ್ತೆ ಅಪಘಾತ: ಬೆಳಗಾವಿ ಶಾಸಕ ಅಭಯ ಪಾಟೀಲ್ ಪ್ರಾಣಾಪಾಯದಿಂದ ಪಾರು

ದೆಹಲಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಶಾಸಕ ಅಭಯ ಪಾಟೀಲ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ನಿನ್ನೆ ರಾತ್ರಿ ದೆಹಲಿಯ ಪಿಡಬ್ಲ್ಯುಡಿ ಕಚೇರಿ ಬಳಿ ಕಾರು ಮತ್ತು ಇನ್ನೋವಾ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇನ್ನೋವಾದಲ್ಲಿದ್ದ ಶಾಸಕ ಅಭಯ ಪಾಟೀಲ್ ಹಾಗೂ ಶಾಸಕ ಅನಿಲ್ ಝಾ ಗಾಯಗೊಂಡಿದ್ದಾರೆ. ನಿಯಂತ್ರಣ ತಪ್ಪಿದ ಕಾರು ಮೊದಲು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು, ಬಳಿಕ ಶಾಸಕರು ಪ್ರಯಾಣಿಸುತ್ತಿದ್ದ ಇನ್ನೋವಾಕ್ಕೆ ಗುದ್ದಿದೆ. ಕಾರಿನಲ್ಲಿದ್ದ ಆಶುತೋಷ್ ಪಾಂಡೆ, ಅವರ ಪತ್ನಿ ಹಾಗೂ ಇಬ್ಬರು ಮಕ್ಕಳಿಗೂ ಗಂಭೀರ ಗಾಯಗಳಾಗಿವೆ.

ಲಕ್ಷ್ಮಿ ನಗರದಿಂದ ಐಟಿಒ ಕಡೆಗೆ ಕಾರು ತೆರಳುತ್ತಿತ್ತು. ಇದೇ ವೇಳೆ ಶಾಸಕರು ಪ್ರಯಾಣಿಸುತ್ತಿದ್ದ ಇನ್ನೋವಾ ಐಟಿಒದಿಂದ ಲಕ್ಷ್ಮಿ ನಗರದ ಕಡೆಗೆ ಬರುತ್ತಿತ್ತು. ಅಪಘಾತದ ಬಳಿಕ ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ದೆಹಲಿಯ ಐ.ಪಿ. ಎಸ್ಟೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಪೊಲೀಸರು ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!