ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಗೋವಾದಿಂದ ಕೇರಳಕ್ಕೆ ಅಕ್ರಮ ಮದ್ಯ ಸಾಗಾಟ ಜಾಲ ಪತ್ತೆ: 438 ಲೀಟರ್ ಮದ್ಯ ವಶ

ಗೋವಾದಿಂದ ಮಂಗಳೂರು ಮೂಲಕ ಕೇರಳಕ್ಕೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಜಾಲವನ್ನು ಅಬಕಾರಿ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.

ಅಬಕಾರಿ ಜಂಟಿ ಆಯುಕ್ತ ಬಾಲಕೃಷ್ಣ ಸಿ.ಎಚ್. ಅವರ ಸೂಚನೆ ಮೇರೆಗೆ ದಕ್ಷಿಣ ಕನ್ನಡ ಅಬಕಾರಿ ಉಪ ಆಯುಕ್ತೆ ಬಿಂದುಶ್ರೀ ಅವರ ನಿರ್ದೇಶನದಲ್ಲಿ ಅಬಕಾರಿ ವಿಶೇಷ ತಂಡವನ್ನು ಕಾರ್ಯಾಚರಣೆಗೆ ನಿಯೋಜಿಸಲಾಗಿತ್ತು.

ವಿಶೇಷ ತಂಡವು ಗೋವಾದಿಂದ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಗ್ಯಾಂಗ್‌ನ್ನು ಪತ್ತೆಹಚ್ಚಿದೆ. ಕಾರ್ಯಾಚರಣೆಯಲ್ಲಿ ಒಂದು ಸ್ವಿಫ್ಟ್ ಡಿಸೈರ್ ಕಾರು ಹಾಗೂ 438 ಲೀಟರ್ ಅಕ್ರಮ ಗೋವಾ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.

ವಾಹನದ ಮಾಲೀಕ ಹಾಗೂ ಚಾಲಕರಾದ ಬಸವರಾಜು ಬೋವಿ ಮತ್ತು ನಾಗವೇಣಿ ನಾಯಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

ವಿಶೇಷ ಕಾರ್ಯಾಚರಣೆಯಲ್ಲಿ ಮಂಗಳೂರು ಉಪವಿಭಾಗದ ಉಪ ಅಧೀಕ್ಷಕಿ ಗಾಯತ್ರಿ ಸಿ.ಎಚ್., ಬಂಟ್ವಾಳ ಉಪವಿಭಾಗದ ಉಪ ಅಧೀಕ್ಷಕ ಸಂತೋಷ್ ಮೋಡಗಿ, ಬಂಟ್ವಾಳ ತಾಲೂಕು ವಲಯ ಅಬಕಾರಿ ನಿರೀಕ್ಷಕ ಲಕ್ಷ್ಮಣ್ ಶಿವಣಗಿ, ತಲಪಾಡಿ ಚೆಕ್‌ಪೋಸ್ಟ್ ನಿರೀಕ್ಷಕ ದತ್ತಗುರು ಅಥೆಣಿ, ಉಪನಿರೀಕ್ಷಕರಾದ ಜಯಪ್ಪ, ಶಿವಶಂಕರ್, ಅಭಿಷೇಕ್ ಹಾಗೂ ಪೇದೆ ಪ್ರಕಾಶ್ ಭಾಗವಹಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಂಟಿ ಆಯುಕ್ತರ ಕಚೇರಿಯ ನಿರೀಕ್ಷಕಿ ಸುನಿತ ಅವರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!