ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮಲ್ಪೆ ಪಡುಕೆರೆ ದಕ್ಕೆಯಲ್ಲಿ ಕೊಲೆ: ಆರೋಪಿ ಗೋವಿಂದ ಪೊಲೀಸರ ವಶಕ್ಕೆ

ಮಲ್ಪೆ ಪಡುಕೆರೆ ದಕ್ಕೆಯಲ್ಲಿ ಬೋಟ್‌ನಲ್ಲಿ ನಡೆದ ಗಲಾಟೆ ವೇಳೆ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಂಗಳವಾರ ಬೆಳಗಿನ ಜಾವ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಅಭಿಷೇಕ್ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದ ಎಂಬಾತನನ್ನು ಮಲ್ಪೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸೋಮವಾರ ರಾತ್ರಿ ಬೋಟ್‌ನಲ್ಲಿ ಗೋವಿಂದ ಮತ್ತು ಅಭಿಷೇಕ್ ನಡುವೆ ಗಲಾಟೆ ನಡೆದಿತ್ತು. ಮಂಗಳವಾರ ಬೆಳಗಿನ ಜಾವ ಗೋವಿಂದ ಅಭಿಷೇಕ್‌ನನ್ನು ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿ ತಿಳಿದ ತಕ್ಷಣ ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಅನಿಲ್ ಕುಮಾರ್ ಡಿ. ಅವರು ಸಿಬ್ಬಂದಿ ಹೆಚ್‌ಸಿ ಆದರ್ಶ ಮತ್ತು ಪಿಸಿ ಕುಬೇರ ಅವರೊಂದಿಗೆ ಆರೋಪಿ ಪತ್ತೆಗೆ ಕಾರ್ಯಾಚರಣೆ ನಡೆಸಿದರು.

ಗೋವಿಂದ ಉಡುಪಿಗೆ ತೆರಳಿ ರೈಲು ನಿಲ್ದಾಣದ ಬಳಿ ಹೈದರಾಬಾದ್ ಅಥವಾ ಮುಂಬೈ ಕಡೆಗೆ ತೆರಳಲು ಮುಂದಾಗಿದ್ದ. ಈ ವೇಳೆ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

ವಿಚಾರಣೆ ವೇಳೆ ಗೋವಿಂದ ಸುಮಾರು 15 ವರ್ಷಗಳಿಂದ ಮನೆಗೆ ತೆರಳದೆ ಮುಂಬೈ, ಹೈದರಾಬಾದ್ ಸೇರಿದಂತೆ ವಿವಿಧೆಡೆ ಕೆಲಸ ಮಾಡಿಕೊಂಡಿದ್ದಾಗಿ ತಿಳಿದುಬಂದಿದೆ.

ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!