ಈಜಲು ತೆರಳಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕೋಟಿಕೆರೆಯಲ್ಲಿ ನಡೆದಿದೆ.

ಮೃತರನ್ನು ವಿಟ್ಲ ಕಸಬಾದ ಗಾಳಿಹಿತ್ಲು ನಿವಾಸಿ ವೀರಪ್ಪ ಗೌಡ ಅವರ ಪುತ್ರ, ಎಸ್‌ಸಿಡಿಸಿಸಿ ಬ್ಯಾಂಕ್ ಉದ್ಯೋಗಿ ಲಿತಿನ್ ಎಂದು ಗುರುತಿಸಲಾಗಿದೆ.
ಬೆಳಗ್ಗಿನ ಜಾವ ಈ ಘಟನೆ ನಡೆದಿದ್ದು, ನೀರಿನಲ್ಲಿ ಮುಳುಗಿದ್ದ ಲಿತಿನ್ ಅವರನ್ನು ಸ್ಥಳೀಯರು ಕೂಡಲೇ ಮೇಲಕ್ಕೆತ್ತಿದ್ದಾರೆ. ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.
ಮೃತರು ತಂದೆ, ತಾಯಿ, ಪತ್ನಿ ಹಾಗೂ ಮಗುವನ್ನು ಅಗಲಿದ್ದಾರೆ.



