ಶಾಲಾ ಶಿಕ್ಷಣ ಇಲಾಖೆ ಹಾಗೂ ಇನ್ನಂಜೆ ಎಸ್.ವಿ.ಎಚ್ ಪದವಿಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಕಾಪು ತಾಲೂಕು ಮಟ್ಟದ ಪದವಿಪೂರ್ವ ವಿಭಾಗದ ಬಾಲಕ-ಬಾಲಕಿಯರ ತ್ರೋಬಾಲ್ ಪಂದ್ಯಾಟಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಪಂದ್ಯಾಟವನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಇನ್ನಂಜೆ ಎಸ್.ವಿ.ಎಚ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರತ್ನ ಕುಮಾರ್, ಉಡುಪಿ ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ರಾಧಾಕೃಷ್ಣ ಎಸ್. ಐತಾಳ್ ಸೇರಿದಂತೆ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಪಂದ್ಯಾಟದಲ್ಲಿ ಕಾಪು ತಾಲೂಕಿನ ವಿವಿಧ ಪದವಿಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ತಂಡಗಳು ಭಾಗವಹಿಸಿವೆ.



