ವಿ.ಸಿ.ಎಸ್. ಮೂಡುಶೆಡ್ಡೆ (ರಿ.) ಇದರ ವತಿಯಿಂದ, ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಅನುಗ್ರಹದೊಂದಿಗೆ ‘ವಿಷ್ಣು ಪಿಲಿಕುಲು’ ಇದರ ದಶಮಾನೋತ್ಸವ ಸಂಭ್ರಮ ಅದ್ಧೂರಿಯಾಗಿ ನಡೆಯಲಿದೆ.

ಅಕ್ಟೋಬರ್ 17 ಮತ್ತು 18ರಂದು ಪಿಲಿಕುಳ ನಿಸರ್ಗಧಾಮದ ಶ್ರೀ ರಾಮ ಭಜನಾ ಮಂದಿರದಲ್ಲಿ ಎರಡು ದಿನಗಳ ಕಾಲ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಅಕ್ಟೋಬರ್ 17ರಂದು ಬೆಳಗ್ಗೆ 8 ಗಂಟೆಗೆ ವಿಷ್ಣುಮೂರ್ತಿ ದೇವಸ್ಥಾನದಿಂದ ಶ್ರೀ ರಾಮ ಭಜನಾ ಮಂದಿರದವರೆಗೆ ಜಂಡೆ ಮೆರವಣಿಗೆ ನಡೆಯಲಿದೆ. ಸಂಜೆ 6 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಬಳಿಕ ಸಂಜೆ 7.30ಕ್ಕೆ ಊದು ಪೂಜೆ ನೆರವೇರಲಿದೆ.

ರಾತ್ರಿ 10 ಗಂಟೆಗೆ ಕಲಾಶ್ರೀ ಕುಸಲ್ದ ಕಲಾವಿದೆರ್ ಬೆದ್ರ ತಂಡದ ಕಲಾವಿದರಿಂದ ‘ನಾಲಾಯಿ ಮಗುರುಜಿ’ ಎಂಬ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಳ್ಳಲಿದೆ. ಹಾಸ್ಯಮಯ ಕಥಾಹಂದರದ ಮೂಲಕ ಪ್ರೇಕ್ಷಕರನ್ನು ರಂಜಿಸಲಿರುವ ನಾಟಕ ವಿಶೇಷ ಆಕರ್ಷಣೆಯಾಗಲಿದೆ.
ಇನ್ನು ಅಕ್ಟೋಬರ್ 18ರಂದು ಬೆಳಗ್ಗೆ 8 ಗಂಟೆಗೆ ಆಕರ್ಷಕ ಹುಲಿವೇಷ ಮೆರವಣಿಗೆ ನಡೆಯಲಿದೆ. ದಶಮಾನೋತ್ಸವದ ಅಂಗವಾಗಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳು ಭಕ್ತರು ಹಾಗೂ ಕಲಾಭಿಮಾನಿಗಳಿಗೆ ವಿಶೇಷ ಅನುಭವ ನೀಡಲಿವೆ.
‘ವಿಷ್ಣು ಪಿಲಿಕುಲು’ ದಶಮಾನೋತ್ಸವದ ಭವ್ಯ ಸಂಭ್ರಮದಲ್ಲಿ ಕಲಾಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಈ ಎಲ್ಲಾ ಕಾರ್ಯಕ್ರಮಗಳ ದೃಶ್ಯಾವಳಿಗಳು ನಿಮ್ಮ ನೆಚ್ಚಿನ ಅಭಿಮತ ಟಿವಿ ಯೂಟ್ಯೂಬ್ ಚಾನೆಲ್ನಲ್ಲಿ ನೇರಪ್ರಸಾರಗೊಳ್ಳಲಿದೆ.



