ಕೆಎಸ್‌ಆರ್‌ಟಿಸಿ ಬಸ್ ಹರಿದು ಎಂಟು ಕುರಿಗಳು ದಾರುಣವಾಗಿ ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಾಕುಬಾಳು ಕ್ರಾಸ್ ಬಳಿ ನಡೆದಿದೆ.

ಹರಿಜನ ಗಾಳೆಪ್ಪ ಅವರಿಗೆ ಸೇರಿದ ಕುರಿಗಳಾಗಿದ್ದು, ಬಸ್ ಹರಿದ ಪರಿಣಾಮ ಎಂಟು ಕುರಿಗಳು ಸ್ಥಳದಲ್ಲೇ ಮೃತಪಟ್ಟಿವೆ. ಇನ್ನೂ ಎರಡು ಕುರಿಗಳಿಗೆ ಗಂಭೀರ ಗಾಯಗಳಾಗಿವೆ.

ಎಮ್ಮಿಗನೂರಿನಿಂದ ಹಗರಿಬೊಮ್ಮನಹಳ್ಳಿಗೆ ತೆರಳುತ್ತಿದ್ದ ಹಗರಿಬೊಮ್ಮನಹಳ್ಳಿ ಡಿಪೋಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ ಕುರಿಗಳಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆ ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.



