ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಹಿರಿಯ ನಾಗರಿಕರ ಸಬಲೀಕರಣಕ್ಕೆ ಕಾನೂನು ಅರಿವು ಅಗತ್ಯ…!

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಬಂಟ್ವಾಳ, ತಾಲೂಕು ಪಂಚಾಯಿತಿ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ ಇವರ ಸಂಯುಕ್ತ ಆಶ್ರಯದಲ್ಲಿ ‘ಅಟಲ್ ವಯೋ ಅಭ್ಯುದಯ ಯೋಜನೆ’ ಕುರಿತು ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಬಿ.ಸಿ.ರೋಡಿನ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ನಡೆಯಿತು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಮ್ತಾಜ್ ಹೆಚ್.ಐ. ಅಧ್ಯಕ್ಷತೆ ವಹಿಸಿ ಮಾತನಾಡಿ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಮೂಲಕ ದೊರೆಯುವ ವಿವಿಧ ಸೌಲಭ್ಯಗಳು ಹಾಗೂ ಸೇವೆಗಳ ಕುರಿತು ಮಾಹಿತಿ ಪಡೆದು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

ಹಿರಿಯ ಸಿವಿಲ್ ನ್ಯಾಯಾಲಯದ ಸರ್ಕಾರಿ ಅಭಿಯೋಜಕಿ ಹರಿಣಿ ಕುಮಾರಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿದ್ದ ಸಹಾಯಕ ಪೊಲೀಸ್ ಅಧೀಕ್ಷಕ ಯಶ್ ಕುಮಾರ್ ಶರ್ಮ ಮಾತನಾಡಿ, ಕುಟುಂಬದಲ್ಲಿ ಹಿರಿಯ ನಾಗರಿಕರನ್ನು ಕಡೆಗಣಿಸಿದ ಸಂದರ್ಭಗಳಲ್ಲಿ ದೊರೆಯುವ ಕಾನೂನು ನೆರವು ಹಾಗೂ ಇಲಾಖಾ ಸೇವೆಗಳ ಕುರಿತು ಮಾಹಿತಿ ನೀಡಿದರು.

ಹಿರಿಯ ನಾಗರಿಕರ ಗುರುತಿನ ಚೀಟಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಪಡೆದುಕೊಳ್ಳುವ ವಿಧಾನಗಳ ಬಗ್ಗೆ ವಿವರಿಸಿದ ಅವರು, ಹಿರಿಯ ನಾಗರಿಕರು ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ಹಂಚಿಕೊಳ್ಳಲು ಆಪ್ತ ಸಮಾಲೋಚನಾ ವ್ಯವಸ್ಥೆಯನ್ನೂ ಬಳಸಿಕೊಳ್ಳಬೇಕು ಎಂದು ತಿಳಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!