ಜನ ಮನದ ನಾಡಿ ಮಿಡಿತ

Advertisement

ಪಣಂಬೂರು: ಕಬ್ಬಿಣದ ರಾಡ್ ತೋರಿಸಿ ಮೊಬೈಲ್ ಕಸಿದುಕೊಂಡ ಆರೋಪ; ಇಬ್ಬರ ವಿರುದ್ಧ ಪ್ರಕರಣ

ಕೆಲಸಕ್ಕೆಂದು ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಕಬ್ಬಿಣದ ರಾಡ್ ತೋರಿಸಿ ಮೊಬೈಲ್ ಕಸಿದುಕೊಂಡ ಆರೋಪದ ಘಟನೆ ಪಣಂಬೂರಿನಲ್ಲಿ ನಡೆದಿರುವ ಬಗ್ಗೆ ಪ್ರಕರಣ ದಾಖಲಾಗಿದೆ.

2020ರ ನವೆಂಬರ್ 16ರಂದು ಬೆಳಿಗ್ಗೆ ಸುಮಾರು 7 ಗಂಟೆಗೆ ಬಿಹಾರದ ಭಾಗಲ್ಪುರ ಜಿಲ್ಲೆಯ ಅಸತೋಲ್ ಗ್ರಾಮದ ಗೋವಿಂದ್ ಕುಮಾರ್ ಎಂಬವರು ಮನೆಯಿಂದ ಕೆಲಸಕ್ಕೆಂದು ಹೊರಟಿದ್ದರು. ಪಣಂಬೂರು ದೀಪಕ್ ಪೆಟ್ರೋಲ್ ಬಂಕ್ ಹಿಂಭಾಗದಿಂದ ಎನ್‌ಎಂಪಿಎ ಮುಖ್ಯ ಆಡಳಿತ ಕಚೇರಿಯ ಕಡೆಗೆ ತೆರಳುವ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಸ್ಕೂಟರ್‌ನಲ್ಲಿ ಬಂದ ಇಬ್ಬರು ಅವರನ್ನು ಅಡ್ಡಗಟ್ಟಿ ತಡೆದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪೋರ್ಕೋಡಿಯ ಜಾವೀದ್ ಆಖ್ತರ್ ಅಲಿಯಾಸ್ ಅಖ್ತರ್ ಹಾಗೂ ಕೆಂಜಾರು ಗ್ರಾಮದ ತೋಯಿದ್ ಖಾದರ್ ಯಾನೆ ತೋಯಿ ಅವರು ಕಬ್ಬಿಣದ ರಾಡ್ ತೋರಿಸಿ ಬೆದರಿಸಿ, ಸುಮಾರು ₹5,000 ಮೌಲ್ಯದ ಮೊಬೈಲ್ ಫೋನ್ ಕಸಿದುಕೊಂಡು ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಗೋವಿಂದ್ ಕುಮಾರ್ ನೀಡಿದ ದೂರಿನ ಆಧಾರದ ಮೇಲೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!