ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮಣಿಪಾಲ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ; ಕಿರುಕುಳ ಆರೋಪದಡಿ ಯುವಕ ಬಂಧನ

ಸುಮಾರು 10 ತಿಂಗಳ ಹಿಂದೆ ನಡೆದ ಮಣಿಪಾಲದ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕಿರುಕುಳ ನೀಡಿದ ಆರೋಪದಡಿ ಯುವಕನೋರ್ವನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

ದಿಯು-ದಮನ್ ಕೇಂದ್ರಾಡಳಿತ ಪ್ರದೇಶದ ಸಾಯಿ ಸಂಜಯ್ ಬಿಂಗಾರೆ (21) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಮಣಿಪಾಲದ ಹೋಟೆಲ್ ಮ್ಯಾನೇಜ್‌ಮೆಂಟ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಅಸ್ಸಾಂ ಮೂಲದ ಲೆಸ್ಲಿ ಜೋಸೆಫ್ ಮ್ಯಾಥ್ಯೂ ಅವರ ಪುತ್ರಿ ಪೌಲಾ ಲೆಸ್ಲಿ ವಾಜ್ರಿರ್ ಅವರು 2025ರ ನವೆಂಬರ್ 7ರಂದು ರಾತ್ರಿ ಮಣಿಪಾಲದ ಕಾಯಿನ್ ಸರ್ಕಲ್ ಬಳಿಯ ತಮ್ಮ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಈ ಕುರಿತು ನ್ಯಾಯಾಲಯದ ಖಾಸಗಿ ದೂರಿನ ಆಧಾರದ ಮೇಲೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಅಂತಿಮ ವರದಿ ಸಲ್ಲಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿದ್ದರು. ಬಳಿಕ ಪೊಲೀಸರು ವಶಪಡಿಸಿಕೊಂಡಿದ್ದ ಮೃತರ ಮೊಬೈಲ್ ಫೋನ್, ಡೈರಿ ಹಾಗೂ ಡಿಜಿಟಲ್ ದಾಖಲೆಗಳನ್ನು ತಂದೆ ಲೆಸ್ಲಿ ಜೋಸೆಫ್ ಮ್ಯಾಥ್ಯೂ ಅವರ ವಶಕ್ಕೆ ನೀಡಲಾಗಿತ್ತು.

ದಾಖಲೆಗಳನ್ನು ಪರಿಶೀಲಿಸಿದ ವೇಳೆ ಸಾಯಿ ಸಂಜಯ್ ಬಿಂಗಾರೆ ಅವರೊಂದಿಗೆ ಸ್ನ್ಯಾಪ್‌ಚಾಟ್ ಮೂಲಕ ನಡೆದಿದ್ದ ಸಂವಹನದ ದಾಖಲೆಗಳು ಪತ್ತೆಯಾಗಿದ್ದವು ಎಂದು ದೂರಿನಲ್ಲಿ ತಿಳಿಸಲಾಗಿದೆ. ಸಾಯಿ ಸಂಜಯ್ ಅವರು ಪೌಲಾ ಲೆಸ್ಲಿ ವಾಜ್ರಿರ್ ಅವರಿಗೆ ಆತ್ಮಹತ್ಯೆಗೆ ಪ್ರೇರಣೆ ನೀಡುವ ರೀತಿಯಲ್ಲಿ ನಿರಂತರ ಕಿರುಕುಳ, ಬಲವಂತ ಅಥವಾ ಬ್ಲ್ಯಾಕ್‌ಮೇಲ್ ಮಾಡಿರುವ ಸಾಧ್ಯತೆ ಇದೆ ಎಂದು ಆರೋಪಿಸಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ತಂದೆ ದೂರು ನೀಡಿದ್ದರು.

ಈ ದೂರಿನ ಆಧಾರದ ಮೇಲೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರ ಸೂಚನೆಯಂತೆ ಠಾಣೆಯ ಎಸ್ಸೈ ತಿಮ್ಮೇಶ್ ಬಿ.ಎನ್. ತನಿಖೆ ಕೈಗೊಂಡು ಸೆ.9ರಂದು ಸಾಯಿ ಸಂಜಯ್ ಬಿಂಗಾರೆ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!