ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆ ಮುಗಿದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೆಲಿಕಾಪ್ಟರ್ ಮೂಲಕ ಹೆಬ್ರಿಗೆ ಆಗಮಿಸಿದ್ದಾರೆ. ಹೆಬ್ರಿಯ ಸರ್ಕಾರಿ ಪದವಿ ಕಾಲೇಜು ಮೈದಾನದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ಹೆಲಿಪ್ಯಾಡ್ಗೆ ಸಿಎಂ ಆಗಮಿಸಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಶಾಸಕರು, ಅಧಿಕಾರಿಗಳು ಹಾಗೂ ಕಾಂಗ್ರೆಸ್ ಮುಖಂಡರು ಸ್ವಾಗತಿಸಿದರು. ಬಳಿಕ ಅವರು ಹೆಬ್ರಿಯ ಸರ್ಕಾರಿ ಪದವಿ ಕಾಲೇಜು ಮೈದಾನದಲ್ಲಿ ನಡೆಯಲಿರುವ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ನಡೆಯಲಿರುವ ಈ ಸಭೆಯಲ್ಲಿ ಉಡುಪಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ವರದಿಯಿಂದ ಉಂಟಾಗಿರುವ ಸಮಸ್ಯೆಗಳು ಹಾಗೂ ಸ್ಥಳೀಯರ ಬೇಡಿಕೆಗಳ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ.



