ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಪುದು ಗ್ರಾ.ಪಂ. ವ್ಯಾಪ್ತಿಯಲ್ಲಿ ‘ಪ್ಲಾಸ್ಟಿಕ್‌ನಿಂದ ಸ್ವಾತಂತ್ರ್ಯ’ ಅಭಿಯಾನ

ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಸ್ವಚ್ಛ ಭಾರತ್ ಮಿಷನ್ ದಕ್ಷಿಣ ಕನ್ನಡ ಹಾಗೂ ಹಸಿರು ದಳ ಮಂಗಳೂರು ಇವರ ವತಿಯಿಂದ ಆಯೋಜಿಸಿರುವ ‘10 ದಿನ, 10 ಪಂಚಾಯತ್‌ಗಳಲ್ಲಿ ಪ್ಲಾಸ್ಟಿಕ್‌ನಿಂದ ಸ್ವಾತಂತ್ರ್ಯ’ ಕಾರ್ಯಕ್ರಮದ ಅಂಗವಾಗಿ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು.

ಈ ಸಂದರ್ಭದಲ್ಲಿ ಹಸಿರು ದಳ ಮಂಗಳೂರಿನ ಮುಖ್ಯಸ್ಥ ನಾಗರಾಜ್ ಬಜಾಲ್ ಮಾತನಾಡಿ, ಆಯ್ಕೆ ಮಾಡಿರುವ 10 ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಶೂನ್ಯ ತ್ಯಾಜ್ಯ ಪಂಚಾಯತ್ ನಿರ್ಮಿಸುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದರು. ಬಳಸಿ ಬಿಸಾಡುವ ಬಟ್ಟೆಗಳಿಂದ ಚೀಲಗಳನ್ನು ತಯಾರಿಸಿ ಸಾರ್ವಜನಿಕರಿಗೆ ವಿತರಿಸುವ ಮೂಲಕ ಪ್ಲಾಸ್ಟಿಕ್ ಬಳಕೆಯಿಂದ ಮುಕ್ತಿ ಪಡೆಯುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಫರಂಗಿಪೇಟೆ ಬಸ್ ನಿಲ್ದಾಣದ ಬಳಿ ಸಾರ್ವಜನಿಕರಿಗೆ ಬಟ್ಟೆಯ ಚೀಲಗಳನ್ನು ಉಚಿತವಾಗಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಪುದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಉಮ್ಮರ್ ಫಾರೂಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!