ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: 51 ಗ್ರಾಮ ಪಂಚಾಯಿತಿಗಳ ಮಲ ತ್ಯಾಜ್ಯ ಸಂಸ್ಕರಣೆಗೆ ಘಟಕ ಮತ್ತೆ ಕಾರ್ಯಾರಂಭ

ತಾಲೂಕಿನ ಗ್ರಾಮೀಣ ಪ್ರದೇಶಗಳ ಮನೆಗಳು ಹಾಗೂ ವಾಣಿಜ್ಯ ಕಟ್ಟಡಗಳ ಶೌಚಾಲಯ ಗುಂಡಿಗಳಿಂದ ಹೊರಬರುವ ಮಲ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಸ್ಕರಿಸುವ ನಿಟ್ಟಿನಲ್ಲಿ ಬಂಟ್ವಾಳ ತಾಲೂಕು ಪಂಚಾಯಿತಿ ಮಹತ್ವದ ಹೆಜ್ಜೆ ಇಟ್ಟಿದೆ.

ಗೋಳ್ತಮಜಲು ಗ್ರಾಮದ ಚಿಮಿಣಿಗುರಿಯಲ್ಲಿರುವ ಬಹುಗ್ರಾಮ ಮಲ ತ್ಯಾಜ್ಯ ನಿರ್ವಹಣಾ ಘಟಕ ಮತ್ತೆ ಕಾರ್ಯಾರಂಭಗೊಂಡಿದ್ದು, ತಾಲೂಕಿನ ಎಲ್ಲ 51 ಗ್ರಾಮ ಪಂಚಾಯಿತಿಗಳಿಂದ ಮಲ ತ್ಯಾಜ್ಯವನ್ನು ಘಟಕಕ್ಕೆ ತರಲು ಸಿದ್ಧತೆ ನಡೆಸಲಾಗಿದೆ.

ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ₹64 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಘಟಕವನ್ನು 2023ರಲ್ಲಿ ಉದ್ಘಾಟಿಸಲಾಗಿತ್ತು. ವಾರಕ್ಕೆ 18 ಸಾವಿರ ಲೀಟರ್ ಮಲ ತ್ಯಾಜ್ಯ ಸಂಸ್ಕರಿಸುವ ಸಾಮರ್ಥ್ಯ ಹೊಂದಿರುವ ಘಟಕವನ್ನು ಆರಂಭದಲ್ಲಿ 25 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಗೆ ಸೀಮಿತಗೊಳಿಸಲಾಗಿತ್ತು.

ಆದರೆ ನಿರೀಕ್ಷಿತ ಪ್ರಮಾಣದಲ್ಲಿ ತ್ಯಾಜ್ಯ ಘಟಕಕ್ಕೆ ಬಾರದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಸ್ಥಗಿತಗೊಂಡಿತ್ತು. ಇದೀಗ ಸಮಸ್ಯೆಗಳನ್ನು ಬಗೆಹರಿಸಿ ಘಟಕವನ್ನು ಮತ್ತೆ ಕಾರ್ಯಾರಂಭ ಮಾಡಲಾಗಿದ್ದು, ತಾಲೂಕಿನ ಎಲ್ಲ 51 ಗ್ರಾಮ ಪಂಚಾಯಿತಿಗಳನ್ನು ಘಟಕಕ್ಕೆ ಜೋಡಿಸುವ ಕಾರ್ಯ ನಡೆಯುತ್ತಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!