ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮೀನುಗಾರಿಕಾ ಕ್ಷೇತ್ರಕ್ಕೆ 70 ಕೋಟಿಗೂ ಅಧಿಕ ಅನುದಾನ; ಚೇತನ್ ಬೆಂಗ್ರೆ

ಮೀನುಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ರಾಜ್ಯ ಸರ್ಕಾರ ₹70 ಕೋಟಿಗೂ ಅಧಿಕ ಅನುದಾನ ಮಂಜೂರು ಮಾಡಿದ್ದು, ಮೀನುಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮೀನುಗಾರರ ಅಧ್ಯಕ್ಷ ಚೇತನ್ ಬೆಂಗ್ರೆ ತಿಳಿಸಿದ್ದಾರೆ.

ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಟೆಪುರದಲ್ಲಿ ನಾಡದೋಣಿಗಳಿಗಾಗಿ ₹8 ಕೋಟಿ, ಕಸಬಾ ಬೆಂಗ್ರೆಯಲ್ಲಿ ದೋಣಿ ತಂಗುದಾಣ ನಿರ್ಮಾಣಕ್ಕೆ ₹6 ಕೋಟಿ ಹಾಗೂ ಅಳಿವೆಬಾಗಿಲಿನಲ್ಲಿ ಬಾಯ್‌ಗಳ ಅಳವಡಿಕೆಗೆ ₹1 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದರು.

ಎಕ್ಕೂರಿನಲ್ಲಿ ಸಗಟು ಮೀನು ಮಾರುಕಟ್ಟೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದ್ದು, ಮೀನುಗಾರಿಕಾ ಸಂಪರ್ಕ ರಸ್ತೆಗಳ ಅಭಿವೃದ್ಧಿಗೂ ₹20 ಕೋಟಿ ಮೀಸಲಿಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮೀನುಗಾರರ ಅಧ್ಯಕ್ಷ ರವಿ ಶ್ರೀಯಾನ್, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್ ಸರಳ ಕರ್ಕೇರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!