ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ ಮಂಗಳೂರು ಗ್ರಾಮಾಂತರ ಜಿಲ್ಲಾ ಸಹಸಂಚಾಲಕರಾಗಿ ನೇಮಕ ಮಾಡಲಾಗಿದೆ.

ಪ್ರದೀಪ್ ಅಜ್ಜಿಬೆಟ್ಟು ಅವರು ಈ ಹಿಂದೆ ಹಿಂದೂ ಜಾಗರಣಾ ವೇದಿಕೆಯ ತಾಲೂಕು ಹೋರಾಟ ಪ್ರಮುಖ್, ಭಜರಂಗದಳದ ತಾಲೂಕು ಸಂಚಾಲಕ ಹಾಗೂ ಬಿಜೆಪಿ ಯುವಮೋರ್ಚಾದ ತಾಲೂಕು ಅಧ್ಯಕ್ಷರಾಗಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಸಂಘಟನೆಯ ವಿವಿಧ ಹಂತಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿರುವ ಅವರು, ಇದೀಗ ಜಿಲ್ಲಾ ಮಟ್ಟದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ಮಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದಲ್ಲಿ ನಡೆದ ಬೈಠಕ್ನಲ್ಲಿ ನೂತನ ಜವಾಬ್ದಾರಿಯನ್ನು ಘೋಷಿಸಲಾಯಿತು. ಹಿಂದೂ ಜಾಗರಣಾ ವೇದಿಕೆಯ ಪ್ರಾಂತ ಸಹಸಂಚಾಲಕ ಸತೀಶ್ ಅವರು ಪ್ರದೀಪ್ ಅಜ್ಜಿಬೆಟ್ಟು ಅವರ ಹೆಸರನ್ನು ಘೋಷಿಸಿದರು.
ಜಿಲ್ಲಾ ಮಟ್ಟದಲ್ಲಿ ಸಂಘಟನೆಯ ಚಟುವಟಿಕೆಗಳನ್ನು ಬಲಪಡಿಸುವುದು ಹಾಗೂ ಕಾರ್ಯಕರ್ತರನ್ನು ಒಗ್ಗೂಡಿಸಿ ವಿವಿಧ ಸಾಮಾಜಿಕ ಮತ್ತು ಧಾರ್ಮಿಕ ವಿಚಾರಗಳಲ್ಲಿ ಸಂಘಟನೆಯನ್ನು ಮುನ್ನಡೆಸುವ ಜವಾಬ್ದಾರಿ ನೂತನ ಜಿಲ್ಲಾ ಸಹಸಂಚಾಲಕರ ಮೇಲಿದೆ.



