ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಇದರಿಂದ ಹಿಂದೂ ವಿದ್ಯಾರ್ಥಿಗಳಿಗೆ ದಸರಾ ಹಬ್ಬದ ಸಂಭ್ರಮದಿಂದ ವಂಚನೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಅ.3ರಿಂದ 21ರವರೆಗೆ ದಸರಾ ರಜೆ ಘೋಷಿಸಿದೆ. ಆದರೆ, ಕೆಲವು ಕ್ರಿಶ್ಚಿಯನ್ ಕಾನ್ವೆಂಟ್ ಶಾಲೆಗಳು ಇದೇ ಅವಧಿಯಲ್ಲಿ ಪರೀಕ್ಷೆ ಹಾಗೂ ತರಗತಿಗಳನ್ನು ನಡೆಸುತ್ತಿವೆ ಎಂದು ಆರೋಪಿಸಿದರು.

ದಸರಾ ರಜೆಯನ್ನು ಕಡಿತಗೊಳಿಸಿ, ಕ್ರಿಸ್‌ಮಸ್‌ ಸಂದರ್ಭದಲ್ಲಿ ಹೆಚ್ಚುವರಿ ರಜೆ ನೀಡುವ ಕ್ರಮ ಸರಿಯಲ್ಲ ಎಂದು ಮುತಾಲಿಕ್ ಆಕ್ಷೇಪ ವ್ಯಕ್ತಪಡಿಸಿದರು. ಈ ಬಾರಿಯೂ ದಸರಾ ರಜೆಯ ಅವಧಿಯಲ್ಲಿ ಶಾಲೆಗಳನ್ನು ನಡೆಸಿದರೆ ರಾಜ್ಯಾದ್ಯಂತ ಕ್ರಿಶ್ಚಿಯನ್ ಕಾನ್ವೆಂಟ್ ಶಾಲೆಗಳ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದರು.

Leave a Reply

Your email address will not be published. Required fields are marked *

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

ಬೆಳ್ತಂಗಡಿ: ಕೆರೆಯಲ್ಲಿ ಪತ್ನಿಯ ಮೃತದೇಹ ಪತ್ತೆ; ಬೆನ್ನಲ್ಲೇ ಪತಿಯೂ ಆತ್ಮಹತ್ಯೆ..!

error: Content is protected !!