ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಗರದ ಕರಂಗಲ್ಪಾಡಿಯಲ್ಲಿ ನಡೆದಿದೆ.

ಘಟನೆ ಮಂಗಳವಾರ ಬೆಳಗ್ಗೆ ಸುಮಾರು 10 ಗಂಟೆಗೆ ನಡೆದಿದೆ ಎನ್ನಲಾಗಿದೆ. ಕೋರ್ಟ್ ರಸ್ತೆಯಿಂದ ಬರುತ್ತಿದ್ದ ಗೂಡ್ಸ್ ಆಟೋ ರಿಕ್ಷಾ, ಕರಂಗಲ್ಪಾಡಿ ಮುಖ್ಯ ರಸ್ತೆಯಿಂದ ಕೋರ್ಟ್ ರಸ್ತೆಗೆ ತಿರುವು ಪಡೆಯುತ್ತಿದ್ದ ಕಾರಿಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಕಾರನ್ನು ನ್ಯಾಯಾಧೀಶ ವಿನಯ್ ಅವರೇ ಚಲಾಯಿಸುತ್ತಿದ್ದರು ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಗೂಡ್ಸ್ ಆಟೋ ಪಲ್ಟಿಯಾಗಿ ಬಿದ್ದಿದ್ದು, ಚಾಲಕ ಚಂದ್ರ ಕೆ. ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ.

ಅಪಘಾತದ ವೇಳೆ ಪಲ್ಟಿಯಾದ ಗೂಡ್ಸ್ ಆಟೋ ಅಲ್ಲೇ ಇದ್ದ ಸ್ಕೂಟರ್‌ಗೆ ಕೂಡ ಡಿಕ್ಕಿಯಾಗಿದ್ದು, ಸ್ಕೂಟರ್ ಸವಾರ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ನ್ಯಾಯಾಧೀಶ ವಿನಯ್ ಅವರಿಗೂ ಕೈಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

ಮೃತ ಚಂದ್ರ ಅವರು ಕಾಸರಗೋಡು ಜಿಲ್ಲೆಯ ಮೊಗ್ರಾಲ್ ನಿವಾಸಿಯಾಗಿದ್ದು, ಮಂಗಳೂರಿನ ಕಲ್ಪನಾ ಸ್ವೀಟ್ಸ್‌ಗೆ ಸೇರಿದ ಗೂಡ್ಸ್ ಆಟೋದಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು.

ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಆಟೋ ನೇರವಾಗಿ ಬಂದು ಕಾರಿಗೆ ಡಿಕ್ಕಿಯಾಗಿರುವುದು ಕಂಡುಬಂದಿದೆ ಎನ್ನಲಾಗಿದೆ. ಆಟೋ ಚಾಲಕನಿಗೆ ಏಕಾಏಕಿ ಕಣ್ಣು ಮಂಜಾಗಿರುವುದು ಅಥವಾ ಯಾವುದಾದರೂ ಸಮಸ್ಯೆ ಉಂಟಾಗಿರುವ ಸಾಧ್ಯತೆಯ ಬಗ್ಗೆಯೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಬ್ರೇಕ್ ಹಾಕಿದ್ದರೆ ಆಟೋದ ಮುಂಭಾಗ ಈ ಪ್ರಮಾಣದಲ್ಲಿ ಅಪ್ಪಚ್ಚಿಯಾಗುತ್ತಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯಾಯಾಧೀಶ ವಿನಯ್ ನೀಡಿದ ದೂರಿನ ಆಧಾರದ ಮೇಲೆ ಕದ್ರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

error: Content is protected !!