ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು ಪ್ರವೇಶಕ್ಕೆ ಅರ್ಜಿ ಸಲ್ಲಿಸದಿರುವುದು ಇದಕ್ಕೆ ಕಾರಣ ಎಂದು ಕುಲಪತಿ ಪ್ರೊ. ಪಿ.ಎಲ್. ಧರ್ಮ ತಿಳಿಸಿದ್ದಾರೆ.

ಮಂಗಳಗಂಗೋತ್ರಿಯಲ್ಲಿ ಮಂಗಳವಾರ ನಡೆದ ವಿಶ್ವವಿದ್ಯಾನಿಲಯದ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಸ್ನಾತಕೋತ್ತರ ಕೋರ್ಸ್‌ಗಳನ್ನು ನಡೆಸಲು ಕನಿಷ್ಠ 15 ವಿದ್ಯಾರ್ಥಿಗಳ ಪ್ರವೇಶ ಅಗತ್ಯವಿದೆ ಎಂದು ತಿಳಿಸಿದರು.

ಆದರೆ ಅನಾಲಿಟಿಕಲ್ ಕೆಮಿಸ್ಟ್ರಿ, ಎಲೆಕ್ಟ್ರಾನಿಕ್ಸ್, ಸೈಬರ್ ಸೆಕ್ಯುರಿಟಿ, ಸಂಖ್ಯಾವಿಜ್ಞಾನ, ಪರಿಸರ ವಿಜ್ಞಾನ, ವಸ್ತು ವಿಜ್ಞಾನ ಮತ್ತು ಜಿಯೋಇನ್ಫರ್ಮ್ಯಾಟಿಕ್ಸ್, ಬಯೋಸೈನ್ಸ್ ಎಂ.ಎಸ್ಸಿ., ಎಂ.ಎಡ್., ಎಂ.ಕಾಂ. ಎಚ್‌ಆರ್‌ಡಿ, ಎಂ.ಸಿ.ಜೆ., ಸಮಾಜಶಾಸ್ತ್ರ, ತುಳು, ಕೊಂಕಣಿ, ಹಿಂದಿ ಹಾಗೂ ಸಂಸ್ಕೃತ ಎಂ.ಎ. ಕೋರ್ಸ್‌ಗಳಿಗೆ ಅಗತ್ಯ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿಲ್ಲ ಎಂದು ಅವರು ಹೇಳಿದರು.

ಈ ಹಿನ್ನೆಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನಲ್ಲಿ ಈ 16 ಸ್ನಾತಕೋತ್ತರ ಕೋರ್ಸ್‌ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕುಲಪತಿ ತಿಳಿಸಿದರು.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

error: Content is protected !!