ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು, ಕಳವಾದ ಬಸ್ ಅನ್ನು ಪೊಲೀಸರು ಮುದುರಂಗಡಿ ಸಮೀಪದ ಮುದ್ದಾಡಿ ಹಾಡಿಯಲ್ಲಿ ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.

ಕಟ್‌ಬೆಳ್ತೂರು ನಿವಾಸಿ ಕೃಷ್ಣ ಅವರು ನೀಡಿದ ದೂರಿನಂತೆ, ಅವರು ಕೆಎ 20 ಎಡಿ 1931 ನೋಂದಣಿ ಸಂಖ್ಯೆಯ ಶ್ರೀ ದುರ್ಗಾಂಬ ಬಸ್‌ನ ನಿರ್ವಾಹಕರಾಗಿದ್ದಾರೆ. ಸೆ.28ರಂದು ರಾತ್ರಿ 9.48ರ ಸುಮಾರಿಗೆ ಚಾಲಕ ರಾಹೀಜ್ ಉಚ್ಚಿಲ ಅವರೊಂದಿಗೆ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ಬಸ್ ನಿಲ್ಲಿಸಿದ್ದರು. ಬಳಿಕ ರಾತ್ರಿ 10 ಗಂಟೆ ಸುಮಾರಿಗೆ ಇಬ್ಬರೂ ಸ್ಕೂಟರ್‌ನಲ್ಲಿ ತೆರಳಿದ್ದರು.

ಮರುದಿನ ಬೆಳಗ್ಗೆ ಎಂದಿನಂತೆ ಬಸ್ ನಿಲ್ಲಿಸಿದ್ದ ಸ್ಥಳಕ್ಕೆ ಬಂದಾಗ ಬಸ್ ಕಾಣೆಯಾಗಿರುವುದು ಗಮನಕ್ಕೆ ಬಂದಿದೆ. ಇಬ್ಬರು ಅಪರಿಚಿತರು ದ್ವಿಚಕ್ರ ವಾಹನದಲ್ಲಿ ಬಂದು ಬಸ್ ಕಳವು ಮಾಡಿಕೊಂಡು ಹೋಗಿರುವ ಶಂಕೆ ವ್ಯಕ್ತಪಡಿಸಲಾಗಿದ್ದು, ಬಸ್‌ನ ಅಂದಾಜು ಮೌಲ್ಯ ಸುಮಾರು 40 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕಳವಾದ ಬಸ್‌ಗಾಗಿ ಶೋಧ ನಡೆಸುತ್ತಿದ್ದ ವೇಳೆ ಸೆ.29ರ ಮುಂಜಾನೆ ಸುಮಾರು 2 ಗಂಟೆಗೆ ಇಬ್ಬರು ಅಪರಿಚಿತರು ಸ್ಕೂಟರ್‌ನಲ್ಲಿ ಚಿಟ್ಪಾಡಿಯ ಹನುಮಾನ್ ಗ್ಯಾರೇಜ್‌ಗೆ ಬಂದಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ.

ಈ ಸುಳಿವಿನ ಆಧಾರದ ಮೇಲೆ ತನಿಖೆ ಮುಂದುವರಿಸಿದ ಪೊಲೀಸರು, ಕಳವು ಮಾಡಲಾಗಿದ್ದ ಬಸ್ ಅನ್ನು ಮುದುರಂಗಡಿ ಸಮೀಪದ ಮುದ್ದಾಡಿ ಹಾಡಿಯಲ್ಲಿ ಬಿಟ್ಟು ಹೋಗಿರುವುದನ್ನು ಪತ್ತೆಹಚ್ಚಿದ್ದಾರೆ. ಬಳಿಕ ಬಸ್ ಅನ್ನು ವಶಕ್ಕೆ ಪಡೆದಿದ್ದು, ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

error: Content is protected !!