ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ ಸೌಪರ್ಣಿಕಾ ನದಿ ಸಮೀಪ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ.

ಮೃತರನ್ನು ವಿಠ್ಠಲ್ ನಾಯಕ್ ಹಾಗೂ ಭವ್ಯಾ ಅಲಿಯಾಸ್ ನಿಶ್ಮಿತಾ ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ವಿಠ್ಠಲ್ ನಾಯಕ್ ಅವರ ಪತ್ನಿಗೆ ಭವ್ಯಾ ಜೊತೆ ಸೇರಿ ಇಂಜೆಕ್ಷನ್‌ಗಳ ಮೂಲಕ ವಿಷಪ್ರಾಶನಗೊಳಿಸಿ ಕೊಲೆ ಮಾಡಲು ಯತ್ನಿಸಿದ ಆರೋಪ ಇವರಿಬ್ಬರ ಮೇಲಿತ್ತು. ಈ ಸಂಬಂಧ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು.

ಭವ್ಯಾ ಹಾಗೂ ವಿಠ್ಠಲ್ ನಾಯಕ್ ನಡುವೆ ಅಕ್ರಮ ಸಂಬಂಧವಿತ್ತು ಎನ್ನಲಾಗಿದ್ದು, ನರ್ಸ್ ಎಂದು ಪರಿಚಯಿಸಿಕೊಂಡು ವಿಠ್ಠಲ್ ನಾಯಕ್ ಅವರ ಪತ್ನಿಗೆ ಇಂಜೆಕ್ಷನ್ ನೀಡಲಾಗಿತ್ತು ಎಂದು ತಿಳಿದುಬಂದಿದೆ. ಘಟನೆ ಬಳಿಕ ಇಬ್ಬರೂ ನಾಪತ್ತೆಯಾಗಿದ್ದು, ಕೊಲ್ಲೂರು ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದರು.

ಈ ಮಧ್ಯೆ ಬೈಂದೂರು ಠಾಣೆ ವ್ಯಾಪ್ತಿಯ ಗೋಳಿಹೊಳೆ ಪ್ರದೇಶದಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ಇಬ್ಬರೂ ಕೆಲವು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಮಾಹಿತಿ ತಿಳಿದು ಬೈಂದೂರು ಪೊಲೀಸರು ಹಾಗೂ ಸೋಕೋ ತಂಡ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದೆ. ಬೈಂದೂರು ಸಿಪಿಐ ಶಿವಕುಮಾರ್, ಕೊಲ್ಲೂರು ಪಿಎಸ್‌ಐ ವಿನಯ್ ಎಂ. ಕೊರ್ಲಹಳ್ಳಿ ಹಾಗೂ ಬೈಂದೂರು ಪಿಎಸ್‌ಐ ಸುನೀಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಘಟನೆಯ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

error: Content is protected !!