ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ ವಿಚಾರಣೆ ಆರಂಭಿಸಿದೆ.

ಪುತ್ತೂರು ನಗರದ ಕೂರ್ನಡ್ಕದ ಮಹಿಳೆಯೊಬ್ಬರು ಸೆ.16ರಂದು ಮಧುಮೇಹಕ್ಕೆ ಸಂಬಂಧಿಸಿದ ಔಷಧ ಪಡೆಯಲು ಸರ್ಕಾರಿ ಆಸ್ಪತ್ರೆಗೆ ತೆರಳಿದ್ದರು. ವೈದ್ಯರ ತಪಾಸಣೆಯ ಬಳಿಕ ಅವರಿಗೆ ಗ್ಲೈಮೆಪಿರೈಡ್ ಸೇರಿದಂತೆ ವಿವಿಧ ಮಾತ್ರೆಗಳನ್ನು ನೀಡಲಾಗಿತ್ತು. ಆದರೆ ವಿತರಿಸಲಾದ ಗ್ಲೈಮೆಪಿರೈಡ್ ಮಾತ್ರೆಗಳ ಬಳಕೆಯ ಅವಧಿ ಆಗಸ್ಟ್‌ನಲ್ಲೇ ಮುಕ್ತಾಯಗೊಂಡಿತ್ತು ಎನ್ನಲಾಗಿದೆ.

ಈ ಬಗ್ಗೆ ಅರಿವಿಲ್ಲದ ಮಹಿಳೆ ಸುಮಾರು 10 ದಿನಗಳ ಕಾಲ ಮಾತ್ರೆಗಳನ್ನು ಸೇವಿಸಿದ್ದರು. ಎರಡು ದಿನಗಳ ಹಿಂದೆ ಅವರ ಆರೋಗ್ಯದಲ್ಲಿ ಕೊಂಚ ಏರುಪೇರಾದ ಹಿನ್ನೆಲೆಯಲ್ಲಿ ಮನೆಯವರು ಔಷಧಗಳನ್ನು ಪರಿಶೀಲಿಸಿದಾಗ ಮಾತ್ರೆಗಳ ಅವಧಿ ಮುಗಿದಿರುವುದು ಗಮನಕ್ಕೆ ಬಂದಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಈ ವಿಷಯವನ್ನು ಆಸ್ಪತ್ರೆಯ ವೈದ್ಯಾಧಿಕಾರಿಗಳ ಗಮನಕ್ಕೆ ತರಲಾಗಿದ್ದು, ರೋಗಿಗಳಿಗೆ ಅವಧಿ ಮೀರಿದ ಔಷಧ ವಿತರಿಸಿರುವ ಕುರಿತು ಸೂಕ್ತ ತನಿಖೆ ನಡೆಸಬೇಕು ಹಾಗೂ ಲೋಪ ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಎಸ್‌ಡಿಪಿಐ ಮುಖಂಡ ತಾಜುದ್ದೀನ್ ಆಗ್ರಹಿಸಿದ್ದಾರೆ.

ದೂರು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಯದುರಾಜ್ ಅವರು ಔಷಧ ವಿತರಣಾ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಸಾಮಾನ್ಯವಾಗಿ ಔಷಧಗಳ ಅವಧಿ ಮುಗಿಯುವ ಒಂದು ತಿಂಗಳ ಮುನ್ನವೇ ಅವುಗಳನ್ನು ವಿಲೇವಾರಿ ಮಾಡುವ ಪ್ರಕ್ರಿಯೆ ನಡೆಯುತ್ತದೆ. ಅಲ್ಲದೆ, ಔಷಧದ ಅವಧಿ ಮುಕ್ತಾಯದ ಕುರಿತು ರೋಗಿಗಳಿಗೆ ಮಾಹಿತಿ ನೀಡಿ, ಅವಧಿ ಮುಗಿಯುವುದರೊಳಗೆ ಬಳಕೆ ಮಾಡುವಂತೆ ಸೂಚಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಆದರೆ ಈ ಪ್ರಕರಣದಲ್ಲಿ ಅವಧಿ ಮೀರಿದ ಮಾತ್ರೆಗಳು ರೋಗಿಗೆ ಹೇಗೆ ವಿತರಿಸಲ್ಪಟ್ಟವು ಎಂಬುದರ ಕುರಿತು ವಿಚಾರಣೆ ನಡೆಸಲಾಗುವುದು. ತನಿಖೆಯ ಬಳಿಕ ವರದಿಯನ್ನು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸಲ್ಲಿಸಲಾಗುವುದು ಎಂದು ಡಾ. ಯದುರಾಜ್ ಸ್ಪಷ್ಟಪಡಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬಡ ಹಾಗೂ ಸಾಮಾನ್ಯ ವರ್ಗದ ರೋಗಿಗಳು ಚಿಕಿತ್ಸೆಗಾಗಿ ಆಗಮಿಸುವ ಹಿನ್ನೆಲೆಯಲ್ಲಿ ಔಷಧ ವಿತರಣೆಯಲ್ಲಿ ಯಾವುದೇ ರೀತಿಯ ಲೋಪವಾಗದಂತೆ ಅಧಿಕಾರಿಗಳು ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!