ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್ ಜನ್ಮ ವೈಭವದ ಅಂಗವಾಗಿ ಅ.3 ಮತ್ತು 4ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಟ್ರಸ್ಟಿ ಗೀತಾಂಜಲಿ ಎಂ. ಸುವರ್ಣ ತಿಳಿಸಿದ್ದಾರೆ.

ಶಂಕರಪುರ ಮಠದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.3ರಂದು ಬೆಳಗ್ಗೆ 7.30ಕ್ಕೆ ಗಣಹೋಮ, 9ಕ್ಕೆ ಪವಮಾನ ಹೋಮ, ಮಧ್ಯಾಹ್ನ 12ಕ್ಕೆ ಆರತಿ ಹಾಗೂ 1ಕ್ಕೆ ಅನ್ನಪ್ರಸಾದ ನಡೆಯಲಿದೆ. ಸಂಜೆ 6ರಿಂದ ರಾಮತಾರಕ ಮಂತ್ರ ಪಠಣ ಹಾಗೂ ರಾತ್ರಿ 7ಕ್ಕೆ ಮಹಾಪೂಜೆ ಜರುಗಲಿದೆ ಎಂದರು.

ಅ.4ರಂದು ಬೆಳಗ್ಗೆ 7ಕ್ಕೆ ವೈಷ್ಣವೀ ಹವನ, 11ಕ್ಕೆ ಕಲಶಾಭಿಷೇಕ, 11.30ಕ್ಕೆ ಗುರುವಂದನೆ ಹಾಗೂ ಮಧ್ಯಾಹ್ನ 12.30ಕ್ಕೆ ಮಹಾಪೂಜೆ ನಡೆಯಲಿದೆ. ಬಳಿಕ ಭಕ್ತರಿಗೆ ಅನ್ನಪ್ರಸಾದ ವಿತರಿಸಲಾಗುವುದು ಎಂದು ಅವರು ತಿಳಿಸಿದರು.

ಅಂದು ಬೆಳಗ್ಗೆ 10.30ಕ್ಕೆ ಪಂಚಾಶತ್ ಜನ್ಮ ವೈಭವ ಕಾರ್ಯಕ್ರಮಕ್ಕೆ ವಿವಿಧ ಮಠಗಳ ಸ್ವಾಮೀಜಿಗಳು ಹಾಗೂ ಗುರುವರ್ಯರ ದಿವ್ಯ ಉಪಸ್ಥಿತಿಯಲ್ಲಿ ಚಾಲನೆ ದೊರೆಯಲಿದೆ. ಎರಡು ದಿನಗಳ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಟ್ರಸ್ಟಿಗಳಾದ ರಾಘವೇಂದ್ರ ಪ್ರಭು ಕರ್ವಾಲು, ಗಜೇಂದ್ರ ಎಸ್. ಬೇಲೆಮನೆ, ವಿಜಯ್ ಕುಂದರ್ ಹಾಗೂ ನಾಗರಾಜ್ ಬೈಂದೂರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!