ಜನ ಮನದ ನಾಡಿ ಮಿಡಿತ

Advertisement

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಸುಳ್ಯ ಐವರ್ನಾಡು ನಿವಾಸಿ ದಯಾನಂದ (30) ಹಾಗೂ ಸುಳ್ಯ ಕಸಬಾ ನಿವಾಸಿ ದರ್ಶನ ರಾಜು (23) ಎಂದು ಗುರುತಿಸಲಾಗಿದೆ.

ಆ.26ರಂದು ರಾತ್ರಿ ಸುಳ್ಯ ಕಸಬಾ ಗ್ರಾಮದ ಅಂಬೆಟಡ್ಕದಲ್ಲಿರುವ ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಬೆಂಕಿಗೆ ಬೈಕ್ ಸಂಪೂರ್ಣ ಸುಟ್ಟುಹೋಗಿತ್ತು. ಘಟನೆಗೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು ಆರೋಪಿಗಳ ಬಗ್ಗೆ ಮಾಹಿತಿ ಕಲೆಹಾಕಿ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಇಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಿದೆ.

ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

error: Content is protected !!