ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಧಿತನನ್ನು ಕೇರಳದ ಕಾಸರಗೋಡು ನಿವಾಸಿ ಅಶ್ರಫ್ ಎಂದು ಗುರುತಿಸಲಾಗಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ 2014ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಆರೋಪಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ವಾರಂಟ್ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಆರೋಪಿಯ ಪತ್ತೆಗೆ ಕಾರ್ಯಾಚರಣೆ ನಡೆಸಿದ ಸುಳ್ಯ ಠಾಣೆಯ ಸಿಬ್ಬಂದಿ ರಾಜು ನಾಯ್ಕ ಹಾಗೂ ಸಂತೋಷ್ ಅವರು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.
ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.



