ಜನ ಮನದ ನಾಡಿ ಮಿಡಿತ

Advertisement

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ದುಶ್ಚಟ ಮುಕ್ತ ಸಮಾಜ ನಿರ್ಮಾಣದ ಸಂದೇಶದೊಂದಿಗೆ ‘ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ’ ಅ.5ರಂದು ಸುಳ್ಯ ಕೇರ್ಪಳದ ಆಶಾ ಪ್ರಕಾಶ್ ಶೆಟ್ಟಿ ಬಂಟರ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಎನ್. ವಿಶ್ವನಾಥ ರೈ ಕಳಂಜ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿಯವರು ಭಾರತವನ್ನು ರಾಮರಾಜ್ಯವನ್ನಾಗಿ ಮಾಡುವ ಕನಸು ಕಂಡಿದ್ದರು. ಸಮಾಜದ ಅಭಿವೃದ್ಧಿ ಹಾಗೂ ಜನರ ಕಲ್ಯಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದ್ದಾರೆ ಎಂದರು.

ಸರ್ಕಾರದಿಂದ ನಡೆಯಬೇಕಾದ ಹಲವು ಜನಪರ ಕಾರ್ಯಗಳನ್ನು ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಕೈಗೆತ್ತಿಕೊಳ್ಳಲಾಗುತ್ತಿದೆ. ಯೋಜನೆಯ ಪ್ರಮುಖ ಕಾರ್ಯಕ್ರಮಗಳಲ್ಲಿ ದುಶ್ಚಟಮುಕ್ತ ಸಮಾಜ ನಿರ್ಮಾಣವೂ ಒಂದಾಗಿದೆ ಎಂದು ವಿಶ್ವನಾಥ ರೈ ತಿಳಿಸಿದರು.

ಗಾಂಧೀಜಿಯವರ ತತ್ವ, ಆದರ್ಶಗಳನ್ನು ಸ್ಮರಿಸುವುದರ ಜತೆಗೆ ಸಮಾಜದಲ್ಲಿ ದುಶ್ಚಟಗಳ ವಿರುದ್ಧ ಜಾಗೃತಿ ಮೂಡಿಸಿ ಆರೋಗ್ಯಕರ ಹಾಗೂ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಜನರನ್ನು ಪ್ರೇರೇಪಿಸುವುದು ಸಮಾವೇಶದ ಉದ್ದೇಶವಾಗಿದೆ ಎಂದು ಅವರು ಹೇಳಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

error: Content is protected !!