ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಸೇರಿದಂತೆ ವಿವಿಧ ಬೆಳೆಗಳಿಗೆ ಹವಾಮಾನ ಆಧರಿತ ಬೆಳೆ ವಿಮೆ ಪರಿಹಾರ ನಿರೀಕ್ಷಿತ ಪ್ರಮಾಣಕ್ಕಿಂತ ಕಡಿಮೆಯಾಗಿರುವ ಕುರಿತು ರೈತರಲ್ಲಿ ಹಲವು ಅನುಮಾನಗಳು ಮೂಡಿವೆ. ಈ ಬಗ್ಗೆ ರಾಜಕೀಯ ಆರೋಪ-ಪ್ರತ್ಯಾರೋಪಗಳ ಬದಲು ವಿಮಾ ವ್ಯವಸ್ಥೆಯ ಪ್ರತಿಯೊಂದು ಹಂತವನ್ನು ಪರಿಶೀಲಿಸಿ ವಾಸ್ತವಾಂಶಗಳನ್ನು ಬಹಿರಂಗಪಡಿಸಬೇಕು ಎಂದು ಅರುಣ್ ಕುಮಾರ್ ಪುತ್ತಿಲ ಒತ್ತಾಯಿಸಿದ್ದಾರೆ.

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಪರಿಣಾಮಕಾರಿಯಾಗಿ ಮುಂದುವರಿಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ವಿಮಾ ಸಂಸ್ಥೆಗಳು ಹಾಗೂ ರೈತ ಪ್ರತಿನಿಧಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. 2023ರ ಬಳಿಕ ವಿಮಾ ಟರ್ಮ್‌ಶೀಟ್‌ನ ಮಾನದಂಡಗಳಲ್ಲಿ ಬದಲಾವಣೆಗಳಾಗಿದ್ದರೆ, ಮಳೆ ಪ್ರಮಾಣ ಲೆಕ್ಕಾಚಾರ ಮತ್ತು ಪರಿಹಾರ ನಿಗದಿಯ ವಿಧಾನವನ್ನು ಸರ್ಕಾರ ಹಾಗೂ ವಿಮಾ ಸಂಸ್ಥೆಗಳು ಸ್ಪಷ್ಟಪಡಿಸಬೇಕು ಎಂದು ಅವರು ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ವಿಮಾ ಕಂತಿನ ಪಾವತಿ, ಟಾಟಾ ಎಐಜಿ ವಿಮಾ ಸಂಸ್ಥೆಯ ಟೆಂಡರ್ ವಿಸ್ತರಣೆ ಹಾಗೂ ಅದರ ಆಡಳಿತಾತ್ಮಕ ಮತ್ತು ಕಾನೂನುಬದ್ಧ ಆಧಾರಗಳ ಬಗ್ಗೆಯೂ ಸಂಪೂರ್ಣ ಮಾಹಿತಿ ಸಾರ್ವಜನಿಕಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಕಳೆದ ವರ್ಷ ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗಿದ್ದರೂ ಅನೇಕ ರೈತರಿಗೆ ನಿರೀಕ್ಷೆಗಿಂತ ಕಡಿಮೆ ಪರಿಹಾರ ದೊರೆತಿದೆ. ಗ್ರಾಮವಾರು ಹವಾಮಾನ ದಾಖಲೆಗಳು, ಹವಾಮಾನ ಮಾಪನ ಯಂತ್ರಗಳ ಕಾರ್ಯನಿರ್ವಹಣೆ ಹಾಗೂ ವಿಮಾ ಲೆಕ್ಕಾಚಾರದಲ್ಲಿ ಬಳಸಲಾದ ದತ್ತಾಂಶವನ್ನು ಪರಿಶೀಲಿಸಬೇಕು ಎಂದು ಪುತ್ತಿಲ ಹೇಳಿದ್ದಾರೆ.

ಗ್ರಾಮವಾರು ಮಳೆ ದಾಖಲೆ, ವಿಮಾ ಘಟಕ, ಟರ್ಮ್‌ಶೀಟ್‌ನ ಪ್ರಮುಖ ಮಾನದಂಡಗಳು, ಅರ್ಹ ರೈತರ ಸಂಖ್ಯೆ ಹಾಗೂ ಪಾವತಿಸಿದ ಪರಿಹಾರದ ವಿವರಗಳನ್ನು ಸಾರ್ವಜನಿಕಗೊಳಿಸಬೇಕು. ರೈತರ ಅಸಮಾಧಾನವನ್ನು ರಾಜಕೀಯಗೊಳಿಸುವ ಬದಲು ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ವೈಜ್ಞಾನಿಕ ನಿಖರತೆ ತರಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

ಪುತ್ತೂರು: ‘ಸೇವಾ ಮೇರಾ ಯೋಗದಾನ್’: ಪ್ರಜ್ಞಾ ಆಶ್ರಮದ ದಿವ್ಯಾಂಗ ಮಕ್ಕಳಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಅನ್ನದಾನ..!

ಉಡುಪಿ: ಉಡುಪಿಯಲ್ಲಿ ಅ.11ರಂದು ‘ಮಹಿಷ ಮಹೋತ್ಸವ’; ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ

ಉಡುಪಿ: ಉಡುಪಿಯಲ್ಲಿ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ; ಒಂಟಿತನ, ಸಾಮಾಜಿಕ ಪ್ರತ್ಯೇಕತೆ ಅಪಾಯಕಾರಿ

ಮಂಗಳೂರು: ಮಂಗಳೂರಿನ ಎ.ಜೆ. ತಾಂತ್ರಿಕ ಕಾಲೇಜಿನಲ್ಲಿ ಅ.8, 9ರಂದು ರಾಷ್ಟ್ರೀಯ ಮಟ್ಟದ ಹ್ಯಾಕಥಾನ್; ₹1 ಲಕ್ಷ ಬಹುಮಾನ

ಬಂಟ್ವಾಳ: ಫಾರಂ ನಂ.7 ದುರುಪಯೋಗ ಆರೋಪ; ಕ್ರಮಕ್ಕೆ ಒತ್ತಾಯಿಸಿ ತಹಶೀಲ್ದಾರ್‌ಗೆ ರಮಾನಾಥ ರೈ ಮನವಿ

ಬಂಟ್ವಾಳ: ಆನೆದೋಡಿಯಲ್ಲಿ ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ

ಬಂಟ್ವಾಳ: ತಲಪಾಡಿಯಲ್ಲಿ ಲಾರಿ–ಬಸ್–ಕಾರ್ ನಡುವೆ ಸರಣಿ ಅಪಘಾತ; ಬಸ್ ಚಾಲಕನಿಗೆ ಸಣ್ಣಪುಟ್ಟ ಗಾಯ..!

ಬೆಂಗಳೂರು: ಏಷ್ಯನ್ ಗೇಮ್ಸ್ ಪದಕ ವಿಜೇತೆ ಎಂ.ಆರ್. ಪೂವಮ್ಮಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸನ್ಮಾನ

ಪುತ್ತೂರು: ಮುಳಿಯ ಗೋಲ್ಡ್ ಸಂಸ್ಥೆಯ ಮಾಲಕ ಸರಾಫ್ ಮುಳಿಯ ಶ್ಯಾಮ ಭಟ್ ನಿಧನ…!

error: Content is protected !!