ಗ್ಯಾರಂಟಿಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೂರುವರೆ ವರ್ಷ ಕಳೆದರೂ ಬಡವರಿಗೆ ಮನೆ, ನಿವೇಶನ ಕಲ್ಪಿಸಿಲ್ಲ. ಬೆಳೆ ವಿಮೆ ಪರಿಹಾರದಲ್ಲೂ ಗ್ರಾಮಗಳ ನಡುವೆ ತಾರತಮ್ಯ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತುಂಗಪ್ಪ ಬಂಗೇರ ಆರೋಪಿಸಿದರು.

ಬಿ.ಸಿ.ರೋಡ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕು ಆಡಳಿತದಲ್ಲಿ ಸಾರ್ವಜನಿಕರ ಅರ್ಜಿಗಳು ಇತ್ಯರ್ಥವಾಗದೆ ಜನರು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ವೃದ್ಧಾಪ್ಯ, ಸಂಧ್ಯಾ ಸುರಕ್ಷಾ ಹಾಗೂ ವಿಧವಾ ವೇತನ ಸಿಗದೆ ಬಡವರು ಪರದಾಡುತ್ತಿದ್ದಾರೆ ಎಂದು ಹೇಳಿದರು.
ಸಾರ್ವಜನಿಕ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲು ನಾಗರಿಕ ಹಿತರಕ್ಷಣಾ ಸಮಿತಿ ವತಿಯಿಂದ ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನ ಆಯೋಜಿಸಲಾಗುವುದು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸತೀಶ್ ಕಜೆಕಾರು, ರತ್ನನಾಥ ಕಜೆಕಾರು, ಯಶವಂತ ಕಜೆಕಾರು ಹಾಗೂ ಕರುಣೇಂದ್ರ ಪೂಜಾರಿ ಉಪಸ್ಥಿತರಿದ್ದರು.



