ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಉಡುಪಿಯಲ್ಲಿ ಜಾನುವಾರು ಕಳವು ಪ್ರಕರಣ: ಇಬ್ಬರ ಬಂಧನ, ನಾಲ್ಕು ಜಾನುವಾರುಗಳ ರಕ್ಷಣೆ

ಕಾರ್ಕಳ ತಾಲೂಕಿನ ಕುಕ್ಕುಜೆ ಸಮೀಪದಿಂದ ಜಾನುವಾರುಗಳನ್ನು ಕಳವು ಮಾಡಿ ವಧೆಗಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ. ಸಾಗಾಟಕ್ಕೆ ಬಳಸಿದ್ದ ಗೂಡ್ಸ್ ಟೆಂಪೊವನ್ನು ವಶಪಡಿಸಿಕೊಂಡಿದ್ದು, ನಾಲ್ಕು ಜಾನುವಾರುಗಳನ್ನು ರಕ್ಷಿಸಿದ್ದಾರೆ.

ಅಕ್ಟೋಬರ್ 9ರಂದು ಸಂಜೆ ಹರಿಖಂಡಿಗೆಯಿಂದ ಹಿರಿಯಡಕ ಕಡೆಗೆ ಗೂಡ್ಸ್ ಟೆಂಪೊದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಬೊಮ್ಮಾರಬೆಟ್ಟು ಗ್ರಾಮದ ಕೊಟ್ನಕಟ್ಟೆ ಬಳಿ ವಾಹನ ನಿಲ್ಲಿಸುವಂತೆ ಸೂಚಿಸಿದರೂ ಚಾಲಕ ನಿಲ್ಲಿಸದೆ ಮುಂದೆ ಸಾಗಿದ್ದ. ಬಳಿಕ ಹಿರಿಯಡಕ ಠಾಣೆಯ ಎದುರಿನ ಅಂಜಾರು ಜಂಕ್ಷನ್‌ನಲ್ಲಿ ಪೊಲೀಸರು ವಾಹನವನ್ನು ತಡೆದು ಪರಿಶೀಲಿಸಿದಾಗ ನಾಲ್ಕು ಜಾನುವಾರುಗಳು ಪತ್ತೆಯಾಗಿವೆ.

ಬಂಧಿತರನ್ನು ಕಾಪು ತಾಲೂಕಿನ ಕುರ್ಕಾಲು ಗ್ರಾಮದ ಸರ್ಕಾರಿಗುಡ್ಡೆ ನಿವಾಸಿ ಅಬ್ದುಲ್ ಸತ್ತರ್ ಹಾಗೂ ಇನ್ನಂಜೆ ಗ್ರಾಮದ ಮಾಳದಬೆಟ್ಟು ನಿವಾಸಿ ಯೋಗೀಶ ನಾಯ್ಕ್ ಎಂದು ಗುರುತಿಸಲಾಗಿದೆ. ವಿಚಾರಣೆ ವೇಳೆ ಕಾರ್ಕಳ ತಾಲೂಕಿನ ಕುಕ್ಕುಜೆ ಗ್ರಾಮದ ಪಲಬೆಟ್ಟು ನಿವಾಸಿ ಕೃಷ್ಣ ಪೂಜಾರಿ ಅವರ ಮನೆಯ ಸಮೀಪ ಮೇಯುತ್ತಿದ್ದ ಜಾನುವಾರುಗಳನ್ನು ಕಳವು ಮಾಡಿ, ಕಸಾಯಿಖಾನೆಗೆ ಮಾರಾಟ ಮಾಡುವ ಉದ್ದೇಶದಿಂದ ಸಾಗಿಸುತ್ತಿದ್ದುದಾಗಿ ಆರೋಪಿಗಳು ತಿಳಿಸಿರುವುದಾಗಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ವಾಷಿಂಗ್ಟನ್: ರಷ್ಯಾ–ಉಕ್ರೇನ್ ಇಂಧನ ಕದನ ವಿರಾಮಕ್ಕೆ ಒಪ್ಪಿಗೆ: ಟ್ರಂಪ್ ಘೋಷಣೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ 24 ಗಂಟೆಯೊಳಗೆ ದಿನಾಂಕ ನಿಗದಿಪಡಿಸಿ: ಸಿಜೆಪಿ ಆಗ್ರಹ

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜು ಎದುರು ವಿದ್ಯಾರ್ಥಿಗಳ ಪ್ರತಿಭಟನೆ

ಉಡುಪಿ: ಉಚ್ಚಿಲ ದಸರಾ ಸಂಭ್ರಮಕ್ಕೆ ವಿದ್ಯುತ್ ದೀಪಗಳ ಮೆರುಗು; 11 ಕಿ.ಮೀ. ಉದ್ದಕ್ಕೂ ಕಂಗೊಳಿಸಿದ ಹೆದ್ದಾರಿ…!

ಉಡುಪಿ: ಉಡುಪಿಯಲ್ಲಿ ಹಾಡಹಗಲೇ ಮೊಬೈಲ್ ಕಳ್ಳತನ; ಸಿಸಿಟಿವಿಯಲ್ಲಿ ಕೃತ್ಯ ಸೆರೆ…!

ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ

ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ

ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ

ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ

error: Content is protected !!