ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ 2007ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳದ ಮಂಚಿ ನಿವಾಸಿ ಇರ್ಷಾದ್ ಅಲಿಯಾಸ್ ಮಹಮ್ಮದ್ ಇರ್ಷಾದ್ ಬಂಧಿತ ಆರೋಪಿ.
ಅಕ್ಟೋಬರ್ 21ರಂದು ಬಂಟ್ವಾಳ ನಗರ ಪೊಲೀಸ್ ಠಾಣೆಯ ಎಎಸ್ಐ ಸುಜು ಹಾಗೂ ಸಿಬ್ಬಂದಿಗಳಾದ ಜಗದೀಶ್ ಮತ್ತು ಮಂಜುನಾಥ್ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಆತನ ಪಾಸ್ಪೋರ್ಟ್ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.



