ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಅ. 25ರಂದು ಉಡುಪಿಯಲ್ಲಿ ರಾಜ್ಯಮಟ್ಟದ ಹಿಂದಿ ಶಿಕ್ಷಕರ ಸಮ್ಮೇಳನ

ಕರ್ನಾಟಕ ರಾಜ್ಯ ಹಿಂದಿ ಭಾಷಾ ಬೋಧಕರ ಸಂಘ, ಬೆಂಗಳೂರು ಹಾಗೂ ಉಡುಪಿ ಜಿಲ್ಲಾ ಹಿಂದಿ ಭಾಷಾ ಬೋಧಕರ ಸಂಘದ ಸಹಯೋಗದಲ್ಲಿ ರಾಜ್ಯಮಟ್ಟದ ಹಿಂದಿ ಶಿಕ್ಷಕರ ಸಮ್ಮೇಳನ ಮತ್ತು ಕಾರ್ಯಾಗಾರ ಅಕ್ಟೋಬರ್ 25ರಂದು ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ.

ಪರ್ಯಾಯ ಶ್ರೀ ಶಿರೂರು ಮಠ ಹಾಗೂ ಶ್ರೀಕೃಷ್ಣ ಮಠದ ಆಶ್ರಯದಲ್ಲಿ ನಡೆಯಲಿರುವ ಕಾರ್ಯಕ್ರಮ ಬೆಳಿಗ್ಗೆ 9.30ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ಉಡುಪಿ ಜಿಲ್ಲಾ ಹಿಂದಿ ಭಾಷಾ ಬೋಧಕರ ಸಂಘದ ಅಧ್ಯಕ್ಷ ಎಚ್.ಎನ್. ವೆಂಕಟೇಶ್ ತಿಳಿಸಿದ್ದಾರೆ.

ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ವಿವಿಧ ಜಿಲ್ಲೆಗಳ ಹಿಂದಿ ಶಿಕ್ಷಕರು ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ಭಾಷಾ ಬೋಧನೆ, ತೃತೀಯ ಭಾಷೆಯ ಮಹತ್ವ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಭಾಷೆಗಳ ಪಾತ್ರದ ಕುರಿತು ಚರ್ಚೆ ನಡೆಯಲಿದೆ ಎಂದು ತಿಳಿಸಿದರು.

ಬೆಳಿಗ್ಗೆ 8.30ರಿಂದ ನೋಂದಣಿ ಮತ್ತು ಉಪಾಹಾರದ ವ್ಯವಸ್ಥೆ ಇರಲಿದ್ದು, 9 ಗಂಟೆಯಿಂದ ವಿದ್ವಾನ್ ನಟರಾಜ್ ಎಚ್.ಎನ್. ಮತ್ತು ಬಳಗದವರಿಂದ ಹಿಂದಿ ಗೀತಾಗಾಯನ ನಡೆಯಲಿದೆ. ಬೆಳಿಗ್ಗೆ 9.30ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಹಿಂದಿ ಭಾಷಾ ಬೋಧಕರ ಸಂಘದ ರಾಜ್ಯಾಧ್ಯಕ್ಷ ಶಶಿಧರ ಸಿ.ಎಂ. ಅಧ್ಯಕ್ಷತೆ ವಹಿಸಲಿದ್ದು, ಪರ್ಯಾಯ ಶ್ರೀ ಶಿರೂರು ಮಠದ ದಿವಾನ ಡಾ. ಉದಯಕುಮಾರ್ ಸರಳತ್ತಾಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಘದ ಗೌರವಾಧ್ಯಕ್ಷ ಡಿ.ಎಂ. ರಾಥೋಡ್ ಗೌರವ ಉಪಸ್ಥಿತರಿರಲಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಅ. 24ರಂದು ಪರಿವಾರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ರಜತ ಮಹೋತ್ಸವ

ಬಂಟ್ವಾಳ: ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ…!

ಅಕ್ಟೋಬರ್ 24ರಂದು ನಿಟ್ಟೆಯಲ್ಲಿ ‘ಯಕ್ಷಗವಿಷ್ಟಿ’ ಯಕ್ಷಗಾನ ಸ್ಪರ್ಧೆ

ಉಡುಪಿ: ಅಗತ್ಯ ಸೌಲಭ್ಯಗಳಿಲ್ಲದೆ ಜಿಲ್ಲಾಸ್ಪತ್ರೆ ಸ್ಥಳಾಂತರಕ್ಕೆ ಸಿದ್ಧತೆ: ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ

ಪುತ್ತೂರು: ಪುತ್ತೂರಿನಲ್ಲಿ ಅಕ್ರಮ ಕೇರಳ ಲಾಟರಿ ಮಾರಾಟ ಜಾಲ ಪತ್ತೆ: ಇಬ್ಬರು ವಶಕ್ಕೆ

ಪುತ್ತೂರು: ಕಾರಿಗೆ ಡಿಕ್ಕಿ ಹೊಡೆದು ಹೆದ್ದಾರಿಯಲ್ಲೇ ಮಗುಚಿಬಿದ್ದ ಲಾರಿ

ಮಂಗಳೂರು: ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ, ಮೂವರು ಆರೋಪಿಗಳ ಬಂಧನ

ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಢಾಕಾ: ಬಾಂಗ್ಲಾದೇಶದ ವಿಶ್ವವಿದ್ಯಾಲಯದಲ್ಲಿ ಗೋಮಾಂಸದ ಅಡುಗೆ ವಿಚಾರವಾಗಿ ವಿವಾದ

error: Content is protected !!