ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಅ.24ರಂದು ಉಡುಪಿಯಲ್ಲಿ ರಾಜ್ಯಮಟ್ಟದ ಮೊಬೈಲ್ ರಿಟೇಲರ್ಸ್ ಸಮಾವೇಶ

ಉಡುಪಿ ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್ ಆಶ್ರಯದಲ್ಲಿ ಅಖಿಲ ಭಾರತ ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್‌ನ ರಾಜ್ಯಮಟ್ಟದ ರಿಟೇಲರ್ಸ್ ಸಮಾವೇಶ ಹಾಗೂ ಸಂಘಟನೆಯ 12ನೇ ವಾರ್ಷಿಕೋತ್ಸವ ಅಕ್ಟೋಬರ್ 24ರಂದು ಅಜ್ಜರಕಾಡಿನ ಪುರಭವನದಲ್ಲಿ ನಡೆಯಲಿದೆ ಎಂದು ಯು.ಎಂ.ಆರ್.ಎ. ಅಧ್ಯಕ್ಷ ವಿವೇಕ್ ಜಿ. ಸುವರ್ಣ ತಿಳಿಸಿದ್ದಾರೆ.

ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಹಕರಿಗೆ ಉತ್ತಮ ಸೇವೆ ಒದಗಿಸುವುದು, ಸ್ಥಳೀಯ ವ್ಯಾಪಾರಿಗಳ ಹಿತರಕ್ಷಣೆ ಹಾಗೂ ವ್ಯವಹಾರದಲ್ಲಿ ಪ್ರಾಮಾಣಿಕತೆಯನ್ನು ಕಾಪಾಡುವುದು ಸಂಘಟನೆಯ ಪ್ರಮುಖ ಧ್ಯೇಯವಾಗಿದೆ ಎಂದರು.

ಮೊಬೈಲ್ ಮಾರಾಟಗಾರರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸೂಕ್ತ ವೇದಿಕೆ ಕಲ್ಪಿಸಿ, ಅವರ ಧ್ವನಿಯಾಗಿ ಕಾರ್ಯನಿರ್ವಹಿಸುವ ಉದ್ದೇಶದಿಂದ ಸಂಘಟನೆಯನ್ನು ಸ್ಥಾಪಿಸಲಾಗಿದೆ. ಹಲವು ವರ್ಷಗಳಿಂದ ರಿಟೇಲರ್‌ಗಳನ್ನು ಕಾಡುತ್ತಿದ್ದ ಸಮಸ್ಯೆಗಳನ್ನು ಸಂಘಟನೆಯು ಕೇವಲ ಒಂದು ವರ್ಷದ ಅವಧಿಯಲ್ಲೇ ಪರಿಹರಿಸುವಲ್ಲಿ ಯಶಸ್ವಿಯಾಗಿದೆ ಎಂದು ಅವರು ತಿಳಿಸಿದರು.

ರಾಜ್ಯಮಟ್ಟದ ಸಮಾವೇಶವು ಮೊಬೈಲ್ ರಿಟೇಲರ್‌ಗಳ ಸಮಸ್ಯೆಗಳು, ಹಿತರಕ್ಷಣೆ ಹಾಗೂ ಸಂಘಟನೆಯ ಮುಂದಿನ ಕಾರ್ಯಚಟುವಟಿಕೆಗಳ ಕುರಿತು ಚರ್ಚಿಸಲು ವೇದಿಕೆಯಾಗಲಿದೆ.

Leave a Reply

Your email address will not be published. Required fields are marked *

ಸುರತ್ಕಲ್: ಸುರತ್ಕಲ್‌ನಲ್ಲಿ ಶಾಲಾ ಬಸ್‌ಗೆ ಟೂರಿಸ್ಟ್ ಬಸ್ ಢಿಕ್ಕಿ: 13 ವಿದ್ಯಾರ್ಥಿಗಳಿಗೆ ಗಾಯ

ಪುತ್ತೂರು: ಪಡ್ನೂರು ಅಂಗನವಾಡಿಯಲ್ಲಿ ಗ್ರಾಮ ಸ್ವರಾಜ್ಯ ಅಭಿಯಾನ, ಸಂವಾದ ಕಾರ್ಯಕ್ರಮ

ಮಂಗಳೂರು: ಎಸ್‌ಐಆರ್ ವಿರುದ್ಧ ಮಂಗಳೂರಿನಲ್ಲಿ ‘ಜಂತರ್ ಮಂತರ್’ ಧರಣಿ…!

ಮಂಗಳೂರು: ಸುಲ್ತಾನ್ ಬತ್ತೇರಿಯಲ್ಲಿ ದಾಂಡಿಯಾ ಕಾರ್ಯಕ್ರಮದ ವಿರುದ್ಧ ದೂರು

ಮಂಗಳೂರಿನಲ್ಲಿ ವಿದ್ಯುತ್ ಶಾಕ್‌ಗೆ ತಾಯಿ ಮಗ ಬಳಿ…!

ಉಡುಪಿ: ಅ. 24ರಂದು ಪರಿವಾರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ರಜತ ಮಹೋತ್ಸವ

ಉಡುಪಿ: ಅ. 25ರಂದು ಉಡುಪಿಯಲ್ಲಿ ರಾಜ್ಯಮಟ್ಟದ ಹಿಂದಿ ಶಿಕ್ಷಕರ ಸಮ್ಮೇಳನ

ಬಂಟ್ವಾಳ: ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ…!

ಅಕ್ಟೋಬರ್ 24ರಂದು ನಿಟ್ಟೆಯಲ್ಲಿ ‘ಯಕ್ಷಗವಿಷ್ಟಿ’ ಯಕ್ಷಗಾನ ಸ್ಪರ್ಧೆ

error: Content is protected !!