ಜನ ಮನದ ನಾಡಿ ಮಿಡಿತ

Advertisement

ಉಡುಪಿ: ನ.15ರೊಳಗೆ ಉಡುಪಿ ಜಿಲ್ಲಾಸ್ಪತ್ರೆಗೆ ಆರೋಗ್ಯ ಸಚಿವರು ಭೇಟಿ ನೀಡಿ ಪರಿಶೀಲಿಸಲಿ: ಯಶ್ಪಾಲ್ ಸುವರ್ಣ ಆಗ್ರಹ

ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಉಡುಪಿಯ ನೂತನ ಜಿಲ್ಲಾಸ್ಪತ್ರೆಯನ್ನು ಸಂಪೂರ್ಣ ವೈದ್ಯಕೀಯ ಸೌಲಭ್ಯಗಳೊಂದಿಗೆ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಸಚಿವರು ನವೆಂಬರ್ 15ರೊಳಗೆ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಲೋಕಾರ್ಪಣೆಯ ದಿನಾಂಕ ಘೋಷಿಸಬೇಕು ಎಂದು ಶಾಸಕ ಯಶ್ಪಾಲ್ ಎ. ಸುವರ್ಣ ಒತ್ತಾಯಿಸಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರತ್ಯೇಕಗೊಂಡು ಉಡುಪಿ ಜಿಲ್ಲೆ ಅಸ್ತಿತ್ವಕ್ಕೆ ಬಂದು 28 ವರ್ಷಗಳಾದರೂ, ಜಿಲ್ಲೆಯ ಜನರ ಬಹುಕಾಲದ ಬೇಡಿಕೆಯಾಗಿರುವ ಸುಸಜ್ಜಿತ ಜಿಲ್ಲಾಸ್ಪತ್ರೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

2021ರಲ್ಲಿ ನೂತನ ಜಿಲ್ಲಾಸ್ಪತ್ರೆಯ ನಿರ್ಮಾಣ ಕಾಮಗಾರಿ ಆರಂಭಗೊಂಡಿದ್ದು, 2023ರಲ್ಲಿಯೇ ಕಟ್ಟಡ ಬಹುತೇಕ ಪೂರ್ಣಗೊಂಡಿದೆ. ಆದರೂ ಆಸ್ಪತ್ರೆ ಈವರೆಗೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿಲ್ಲ. ಕಳೆದ ಮೂರೂವರೆ ವರ್ಷಗಳಿಂದ ವೈಯಕ್ತಿಕವಾಗಿ, ಪತ್ರಗಳ ಮೂಲಕ ಹಾಗೂ ವಿಧಾನಮಂಡಲದ ಅಧಿವೇಶನಗಳಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆಯುತ್ತಿದ್ದರೂ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ ಎಂದು ಹೇಳಿದರು.

ಹಿಂದಿನ ಮತ್ತು ಪ್ರಸ್ತುತ ಮುಖ್ಯಮಂತ್ರಿಗಳು, ಆರೋಗ್ಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ, ಆಸ್ಪತ್ರೆಯ ಕಾರ್ಯಾರಂಭದ ಕುರಿತು ಈವರೆಗೆ ಸ್ಪಷ್ಟ ನಿರ್ಧಾರ ಪ್ರಕಟವಾಗಿಲ್ಲ. ಕೂಡಲೇ ಸರ್ಕಾರ ಅಗತ್ಯ ಕ್ರಮ ಕೈಗೊಂಡು ಆಸ್ಪತ್ರೆಯನ್ನು ಪೂರ್ಣ ಪ್ರಮಾಣದಲ್ಲಿ ಸಾರ್ವಜನಿಕರ ಸೇವೆಗೆ ಸಮರ್ಪಿಸಬೇಕು ಎಂದು ಯಶ್ಪಾಲ್ ಸುವರ್ಣ ಆಗ್ರಹಿಸಿದರು.

Leave a Reply

Your email address will not be published. Required fields are marked *

ಉಡುಪಿ: ಸುಪ್ರೀಂ ಕೋರ್ಟ್‌ಗೆ ಮುತ್ತಿಗೆ ಹಾಕುವ ಪ್ರಯತ್ನಕ್ಕೆ ರಾಹುಲ್ ಗಾಂಧಿ ಪ್ರಚೋದನೆ: ಕೆ.ಎಸ್. ನವೀನ್ ಆರೋಪ

ಮಂಗಳೂರು: ವಾಮಂಜೂರು ಶಾಲೆಯಲ್ಲಿ ಹಣಕಾಸು ಅವ್ಯವಹಾರದ ಆರೋಪ: 11 ವರ್ಷಗಳ ಲೆಕ್ಕಪತ್ರ ಬಹಿರಂಗಪಡಿಸಲು ಆಗ್ರಹ..!

ಮಂಗಳೂರು: ಪ್ರೀತಿ ವಿಚಾರವಾಗಿ ರಾಕೇಶ್ ಕೊಲೆ ಪ್ರಕರಣ: ನಾಲ್ವರು ಆರೋಪಿಗಳು ದೋಷಿಗಳು ಎಂದು ನ್ಯಾಯಾಲಯ ತೀರ್ಪು

ಬೆಂಗಳೂರು: ನಂದಿನಿ ಹಾಲಿನ ದರ ಲೀಟರ್‌ಗೆ ₹8 ಏರಿಕೆ: ನವೆಂಬರ್ 1ರಿಂದಲೇ ಹೊಸ ದರ ಜಾರಿ

ಉಡುಪಿ: ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಣೆ ಅಭಿನಂದನೀಯ: ವಿನಯಕುಮಾರ್ ಸೊರಕೆ

ಉಡುಪಿ: ಬಾಡಿಗೆ ಮುಂಗಡ ಹಣದ ವಿವಾದ; ಅಂಗಡಿ ಮಾಲೀಕನ ಮೇಲೆ ಆ್ಯಸಿಡ್ ದಾಳಿ, ಆರೋಪಿ ಬಂಧನ

ಬಂಟ್ವಾಳ: ಕಂಬಳದಲ್ಲಿ ಗೆದ್ದ ಚಿನ್ನದ ಪದಕ ಅನಾರೋಗ್ಯಪೀಡಿತ ಸಹಾಯಕನಿಗೆ ಸಮರ್ಪಣೆ

ಉಡುಪಿ: ರೌಡಿಶೀಟರ್ ಸುಜಿತ್ ಪಿಂಟೊ ಕೊಲೆ ಪ್ರಕರಣ; ಮತ್ತೋರ್ವ ಆರೋಪಿ ಬಂಧನ….!

ಉಡುಪಿ: ಪ್ರವಾಸಿಗರಿಗೆ ಗಾಂಜಾ ಮಾರಾಟ ಆರೋಪ; ಇಬ್ಬರ ಬಂಧನ, 5.710 ಕೆ.ಜಿ. ಗಾಂಜಾ ವಶ

error: Content is protected !!