ಕರ್ನಾಟಕ ಸರ್ಕಾರ 2026ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸಾಧಕರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮಾಧ್ಯಮ ಮತ್ತು ಛಾಯಾಗ್ರಹಣ ಕ್ಷೇತ್ರದಲ್ಲಿ ವಿಶ್ವನಾಥ್ ಸುವರ್ಣ, ಸಮಾಜ ಸೇವೆಯಲ್ಲಿ ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಎ.ಸಿ. ಭಂಡಾರಿ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಡಾ. ಇಂದಿರಾ ಹೆಗಡೆ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಡೆಕ್ಕನ್ ಹೆರಾಲ್ಡ್ ಮತ್ತು ಪ್ರಜಾವಾಣಿಯಲ್ಲಿ ಸುಮಾರು 45 ವರ್ಷಗಳ ಕಾಲ ಪತ್ರಿಕಾ ಛಾಯಾಗ್ರಾಹಕರಾಗಿ ಸೇವೆ ಸಲ್ಲಿಸಿರುವ ವಿಶ್ವನಾಥ್ ಸುವರ್ಣ, ತಮ್ಮ ಛಾಯಾಚಿತ್ರಗಳ ಮೂಲಕ ಕರ್ನಾಟಕದ ಕೋಟೆಗಳು ಹಾಗೂ ಪಕ್ಷಿ ಪ್ರಪಂಚವನ್ನು ದಾಖಲಿಸಿದ್ದಾರೆ.

ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರಿನ ಎ.ಸಿ. ಭಂಡಾರಿ ಅವರು ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಸಮಾಜ ಸೇವೆಯಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ.

ಕಿನ್ನಿಗೋಳಿಯ ಡಾ. ಇಂದಿರಾ ಹೆಗಡೆ ಅವರು ತುಳು-ಕನ್ನಡ ಸಾಹಿತ್ಯ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ. ತುಳುನಾಡಿನ ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಯನ್ನು ತಮ್ಮ ಕೃತಿಗಳ ಮೂಲಕ ದಾಖಲಿಸಿದ್ದಾರೆ.
ಈ ಮೂವರು ಸೇರಿದಂತೆ ರಾಜ್ಯದ ಒಟ್ಟು 71 ಮಂದಿ ಸಾಧಕರು 2026ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.



