ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮೀನು ಸಂರಕ್ಷಣೆಗೆ ಬಳಸುವ ಮಂಜುಗಡ್ಡೆ ತಯಾರಿಕಾ ಘಟಕಗಳಿಗೆ ಆಹಾರ ಸುರಕ್ಷತಾ ಅಧಿಕಾರಿಗಳ ಭೇಟಿ

ಹಸಿ ಮೀನುಗಳ ಸಂರಕ್ಷಣೆಗಾಗಿ ಬಳಸಲಾಗುವ ಮಂಜುಗಡ್ಡೆಯ ಗುಣಮಟ್ಟ ಪರಿಶೀಲಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಡಾ. ಪ್ರವೀಣ್ ಕುಮಾರ್ ಸಿಎಚ್ ಅವರ ತಂಡ ಜಿಲ್ಲೆಯ ಮಂಜುಗಡ್ಡೆ ತಯಾರಿಕಾ ಘಟಕಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಮಂಗಳೂರಿನ ಬಂದರು ಧಕ್ಕೆಯಲ್ಲಿರುವ ಮಂಜುಗಡ್ಡೆ ತಯಾರಿಕಾ ಘಟಕಗಳಿಗೆ ಭೇಟಿ ನೀಡಿದ ಅಧಿಕಾರಿಗಳು, ಅಲ್ಲಿಂದ ಮಂಜುಗಡ್ಡೆಯ ಮಾದರಿಗಳನ್ನು ಸಂಗ್ರಹಿಸಿದರು.

ಈ ಘಟಕಗಳಲ್ಲಿ ನೀರಿನ ಟ್ಯಾಂಕರ್‌ಗಳ ಮೂಲಕ ಸಿಹಿನೀರನ್ನು ಖರೀದಿಸಿ ಮಂಜುಗಡ್ಡೆ ತಯಾರಿಸಲಾಗುತ್ತಿರುವುದು ಪರಿಶೀಲನೆ ವೇಳೆ ಗಮನಕ್ಕೆ ಬಂದಿದೆ. ಮಂಜುಗಡ್ಡೆ ತಯಾರಿಕೆಗೆ ಬಳಸುವ ನೀರಿನ ಪ್ರಯೋಗಾಲಯ ವರದಿಗಳನ್ನು ಪಡೆದು, ನೀರಿನ ಗುಣಮಟ್ಟ ಖಚಿತಪಡಿಸಿಕೊಂಡ ಬಳಿಕವೇ ಮಂಜುಗಡ್ಡೆ ತಯಾರಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಅಲ್ಲದೆ, ಮೀನುಗಳ ಸಂರಕ್ಷಣೆಗಾಗಿ ಫಾರ್ಮಲಿನ್ ಅಥವಾ ಇನ್ಯಾವುದೇ ರಾಸಾಯನಿಕಗಳನ್ನು ಬಳಸಬಾರದು ಎಂದು ಘಟಕದ ಮಾಲೀಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಆಹಾರ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಸಾಮಾಜಿಕ ಸೇವೆ ಗುರುತಿಸಿ ಐಕಳ ಹರೀಶ್ ಶೆಟ್ಟಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಗೌರವ

ಮಂಗಳೂರು: ಲಕ್ಷಾಂತರ ಬಾಂಗ್ಲಾದೇಶಿಗರಿದ್ದಾರೆ ಎಂದವರು ಈಗ ಎಲ್ಲಿದ್ದಾರೆ ತೋರಿಸಿ: ಪ್ರಕಾಶ್ ರಾಜ್ ಸವಾಲು

ಮಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಕೊರತೆ ತಪ್ಪಿಸಲು ಮುನ್ನೆಚ್ಚರಿಕೆ ವಹಿಸಿ: ಯು.ಟಿ. ಖಾದರ್ ಸೂಚನೆ

ಬಂಟ್ವಾಳ: ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್‌ಗೆ ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಸವಾರ ಸಾವು

ಉಡುಪಿ: ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಿಂದ ಡಾ. ಚಂದ್ರಶೇಖರ್ ಹೆಸರು ಕೈಬಿಟ್ಟಿರುವುದು ಖಂಡನೀಯ: ಸುನಿಲ್ ಕುಮಾರ್

ದಕ್ಷಿಣ ಕನ್ನಡ: ಮಿಜಾರ್‌ನಲ್ಲಿ ಅಭಿಮಾನಿ ಬಸ್–ಸ್ಕೂಟರ್ ನಡುವೆ ಭೀಕರ ಅಪಘಾತ; ಸವಾರ ಗಂಭೀರ

ಬಂಟ್ವಾಳ: ಬಂಟ್ವಾಳ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಚಾಲನೆ

ಬಂಟ್ವಾಳ: ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಸಹಸವಾರ ಸಾವು

ಮಂಗಳೂರು: ಮಂಗಳೂರಿನ ಕೊಟ್ಟಾರ ಇನ್ಫೋಸಿಸ್ ಕ್ಯಾಂಪಸ್ ಮಾರಾಟ: ಮುಕುಂದ್ ಎಂ.ಜಿ.ಎಂ. ರಿಯಾಲಿಟಿ ಖರೀದಿ

error: Content is protected !!