ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 73ರ ಅಡ್ಯಾರ್ ಕಣ್ಣೂರಿನಲ್ಲಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಶುಕ್ರವಾರ ರಾತ್ರಿ ಪಲ್ಟಿಯಾದ ಘಟನೆ ನಡೆದಿದೆ.

ಅಡ್ಯಾರ್ ಕಣ್ಣೂರಿನ ಮಸೀದಿಯ ಸಮೀಪ ಈ ಅಪಘಾತ ಸಂಭವಿಸಿದ್ದು, ಮಂಗಳೂರಿನಿಂದ ಬೆಂಗಳೂರಿನ ಕಡೆಗೆ ಗ್ಯಾಸ್ ಸಿಲಿಂಡರ್ಗಳನ್ನು ಸಾಗಿಸುತ್ತಿದ್ದ ಲಾರಿ ರಸ್ತೆಯಲ್ಲೇ ಉರುಳಿಬಿದ್ದಿದೆ. ಘಟನೆಯಲ್ಲಿ ಲಾರಿ ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದರು.
ಲಾರಿ ಪಲ್ಟಿಯಾದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ತಕ್ಷಣ ಕಾರ್ಯಪ್ರವೃತ್ತರಾದ ಸಂಚಾರ ಪೊಲೀಸರು ವಾಹನಗಳನ್ನು ಪರ್ಯಾಯ ರಸ್ತೆಗಳ ಮೂಲಕ ಸಂಚರಿಸಲು ವ್ಯವಸ್ಥೆ ಕಲ್ಪಿಸಿದರು.



