ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ವೈದ್ಯಕೀಯ ಕಾಲೇಜು, ಆಸ್ಪತ್ರೆ ಕ್ಯಾಂಟೀನ್‌ಗಳಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳ ತಪಾಸಣೆ

ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಸೂಚನೆಯ ಮೇರೆಗೆ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರಿನ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ ಕ್ಯಾಂಟೀನ್‌ಗಳಲ್ಲಿ ಆಹಾರದ ಗುಣಮಟ್ಟ ಹಾಗೂ ಸ್ವಚ್ಛತೆ ಕುರಿತು ಪರಿಶೀಲನೆ ನಡೆಸಿದರು.

ಡಾ. ಪ್ರವೀಣ್ ಕುಮಾರ್ ನೇತೃತ್ವದ ತಂಡ ಸುರತ್ಕಲ್‌ನ ಶ್ರೀನಿವಾಸ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಕ್ಯಾಂಟೀನ್, ಹಾಸ್ಟೆಲ್ ಮೆಸ್ ಹಾಗೂ ಅಡುಗೆ ಕೋಣೆಗೆ ಭೇಟಿ ನೀಡಿ ತಪಾಸಣೆ ನಡೆಸಿತು. ಆಹಾರ ತಯಾರಿಕೆಗೆ ಬಳಸುವ ಸಾಮಗ್ರಿಗಳ ಮಾದರಿಗಳನ್ನು ಸಂಗ್ರಹಿಸಿ, ಪರಿಶೀಲನೆಗಾಗಿ ಆಹಾರ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಯಿತು.

ಈ ವೇಳೆ ಕ್ಯಾಂಟೀನ್ ಮತ್ತು ಅಡುಗೆ ಸಿಬ್ಬಂದಿಗೆ ವೈಯಕ್ತಿಕ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಲಾಯಿತು. ಅಲ್ಲದೆ, ಮುಲ್ಕಿ ಕಾರ್ನಾಡ್ ವ್ಯಾಪ್ತಿಯ ಬೇಕರಿಗಳಲ್ಲಿಯೂ ಸಿಹಿತಿಂಡಿಗಳ ಗುಣಮಟ್ಟ ಪರಿಶೀಲನೆ ನಡೆಸಲಾಯಿತು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

 

Leave a Reply

Your email address will not be published. Required fields are marked *

ಉಡುಪಿ: ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ: ಪ್ರತೀಕ್ ಬಾಯಲ್

ಬಂಟ್ವಾಳ: ಬಂಟ್ವಾಳಕ್ಕೆ ಗ್ರಾಮಾಂತರ ಸೈಬರ್ ಪೊಲೀಸ್ ಠಾಣೆ ಸ್ಥಳಾಂತರ

ಬಂಟ್ವಾಳ: ಉಪ್ಪಿನಂಗಡಿ ಟೋಲ್ ವಿರೋಧಿಸಿ ಬ್ರಹ್ಮರಕೂಟ್ಲು ಟೋಲ್‌ಗೆ ಎಸ್‌ಡಿಪಿಐ ಮುತ್ತಿಗೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಬಂಟ್ವಾಳ: ನಿಂತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

ಮಂಗಳೂರು: ಕ್ಲಸ್ಟರ್ ಕಿಚನ್ ವಿರೋಧಿಸಿ ಉಳ್ಳಾಲದಲ್ಲಿ ಬಿಸಿಯೂಟ ನೌಕರರ ಪ್ರತಿಭಟನೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಡಳಿತ ಭಾಷೆಯಾಗಿ ತುಳುವಿಗೆ ಮಾನ್ಯತೆ

ಮಂಗಳೂರು: ಬಂಟ್ವಾಳದಲ್ಲಿ ಅಬಕಾರಿ ದಾಳಿ: 20.37 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತಿ

error: Content is protected !!