ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಬೆಂಗಳೂರಿನಲ್ಲಿ ಪತ್ನಿಯ ಕಣ್ಣೆದುರೇ ರಿಯಲ್ ಎಸ್ಟೇಟ್ ಉದ್ಯಮಿ ಬರ್ಬರ ಹತ್ಯೆ

ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಪತ್ನಿಯ ಎದುರೇ ಐದಾರು ಮಂದಿಯ ತಂಡ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆಗೈದ ಘಟನೆ ಶುಕ್ರವಾರ ಬೆಳಗ್ಗೆ ಬೆಂಗಳೂರಿನ ಯಲಹಂಕ ನ್ಯೂಟೌನ್‌ನ ಶೇಷಾದ್ರಿಪುರಂ ಕಾಲೇಜು ಸಮೀಪ ನಡೆದಿದೆ.

ಹತ್ಯೆಯಾದ ಉದ್ಯಮಿಯನ್ನು 39 ವರ್ಷದ ಚರಣ್ ಗೌಡ ಎಂದು ಗುರುತಿಸಲಾಗಿದೆ. ಇವರು ಧಣಿ ಪ್ರಾಪರ್ಟೀಸ್ ಸಂಸ್ಥೆಯ ಮಾಲೀಕರಾಗಿದ್ದು, ಪಂಜಾಬ್ ನ್ಯಾಷನಲ್ ಬ್ಯಾಂಕ್ ಕಟ್ಟಡದ ಮೇಲಿನ ಮಹಡಿಯಲ್ಲಿ ಕಚೇರಿ ಹೊಂದಿದ್ದರು.

ಶುಕ್ರವಾರ ಬೆಳಗ್ಗೆ ಸುಮಾರು 10.45ರ ವೇಳೆಗೆ ಚರಣ್ ಗೌಡ ಅವರು ಪತ್ನಿಯೊಂದಿಗೆ ಮನೆಯಿಂದ ಕಚೇರಿಗೆ ಆಗಮಿಸಿದ್ದರು. ಈ ವೇಳೆ ಕಚೇರಿಯತ್ತ ತೆರಳುತ್ತಿದ್ದ ಪತ್ನಿಗಾಗಿ ಕಾಯುತ್ತಿದ್ದ ಐದಾರು ಮಂದಿಯ ದುಷ್ಕರ್ಮಿಗಳ ತಂಡ, ಚರಣ್ ಗೌಡ ಅವರ ಮೇಲೆ ಏಕಾಏಕಿ ದಾಳಿ ನಡೆಸಿದೆ. ಮಾರಕಾಸ್ತ್ರಗಳಿಂದ ತಲೆಗೆ ಬಲವಾಗಿ ಹೊಡೆದು ಮನಬಂದಂತೆ ಹಲ್ಲೆ ನಡೆಸಿ ಹತ್ಯೆಗೈದ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಪತಿಯ ಕಣ್ಣೆದುರೇ ನಡೆದ ಹತ್ಯೆಯಿಂದ ಪತ್ನಿ ಆಘಾತಕ್ಕೊಳಗಾಗಿ ಸ್ಥಳದಲ್ಲೇ ಕಣ್ಣೀರಿಟ್ಟು ಆಕ್ರಂದನಗೈದಿದ್ದಾರೆ. ‘ಕಾರು ತೆಗೆಯಿರಿ, ಹೋಗೋಣ’ ಎಂದು ಪತಿಯನ್ನು ಕರೆದರೂ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಅವರು ಕಂಗಾಲಾಗಿದ್ದಾರೆ ಎನ್ನಲಾಗಿದೆ.

ಹಳೆ ದ್ವೇಷದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಸುಮಾರು 22 ವರ್ಷದ ಯುವಕರ ತಂಡ ಕೃತ್ಯ ಎಸಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಘಟನಾ ಸ್ಥಳಕ್ಕೆ ಯಲಹಂಕ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಗಾಳಿ ಮಳೆ ಅಬ್ಬರಕ್ಕೆ ಮನೆಗಳಿಗೆ ಹಾನಿ; ಕೊಟ್ಟಿಗೆಗೆ ಬೆಂಕಿ

ಬೆಂಗಳೂರು: ಬೆಂಗಳೂರಿನ ರಾಜ್ಯೋತ್ಸವ ಸಾಧಕರ ಸಮಾಗಮಕ್ಕೆ ಡಾ. ವಾಮನ್ ರಾವ್ ಬೇಕಲ್ ಅಧ್ಯಕ್ಷ

ಅಬುಧಾಬಿ : ವಕ್ವಾಡಿ ಪ್ರವೀಣ್ ಶೆಟ್ಟಿಯವರಿಗೆ ಅಬುಧಾಬಿ ಕರ್ನಾಟಕ ಸಂಘದ ಪ್ರತಿಷ್ಠಿತ ‘ದ. ರಾ. ಬೇಂದ್ರೆ ಪ್ರಶಸ್ತಿ’

ವಿಟ್ಲ: ಕತ್ತಿ ಬೀಸಿದ ಪರಿಣಾಮ ವ್ಯಕ್ತಿ ಸಾವು: 24 ವರ್ಷದ ಯುವತಿ ಬಂಧನ

ಮಂಗಳೂರು: ವಳಾಲು ಟೋಲ್ ಆರಂಭದ ಬೆನ್ನಲ್ಲೇ ಬ್ರಹ್ಮರಕೂಟ್ಲು ಟೋಲ್‌ಗೆ ಮುತ್ತಿಗೆ

ಮಂಗಳೂರು: ಪತ್ನಿ ಹತ್ಯೆ ಪ್ರಕರಣ: ಪತಿಗೆ 5 ವರ್ಷ ಜೈಲು ಶಿಕ್ಷೆ

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನ ದುರಂತದ ಅಣಕು ಕಾರ್ಯಾಚರಣೆ

ಕಾಸರಗೋಡು: ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನಗರಸಭೆ ಉದ್ಯೋಗಿ ಪತ್ತೆ

ಉಡುಪಿ: ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ: ಪ್ರತೀಕ್ ಬಾಯಲ್

error: Content is protected !!