ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: 14 ವರ್ಷದ ವಿದ್ಯಾರ್ಥಿ ಮೃತ್ಯು

ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ 14 ವರ್ಷದ ವಿದ್ಯಾರ್ಥಿಯೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬೆಂಜನಪದವು ಸಮೀಪದ ಕಲ್ಪನೆ ಎಂಬಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಅಮ್ಟಾಡಿ ದೇವಿನಗರ ಲೋರಿಬೆಟ್ಟು ನಿವಾಸಿ ಸುಚಿನ್ ಎಸ್. ಎಂದು ಗುರುತಿಸಲಾಗಿದೆ. ಸುಚಿನ್ ಡೊಮಿನಿಕ್ ವಿದ್ಯಾಸಂಸ್ಥೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ.

ಸುಚಿನ್ ಅವರು ಬೈಕ್‌ನಲ್ಲಿ ಬೆಂಜನಪದವಿನಿಂದ ಪೊಳಲಿ ಕಡೆಗೆ ತೆರಳುತ್ತಿದ್ದ ವೇಳೆ ಕಲ್ಪಣೆ ಸಮೀಪ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದರು.

ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 15ರ ಬೆಳಗ್ಗೆ ಸುಚಿನ್ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯ ಎಸ್‌ಐ ಆದರ್ಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ: ಪ್ರತೀಕ್ ಬಾಯಲ್

ಬಂಟ್ವಾಳ: ಬಂಟ್ವಾಳಕ್ಕೆ ಗ್ರಾಮಾಂತರ ಸೈಬರ್ ಪೊಲೀಸ್ ಠಾಣೆ ಸ್ಥಳಾಂತರ

ಬಂಟ್ವಾಳ: ಉಪ್ಪಿನಂಗಡಿ ಟೋಲ್ ವಿರೋಧಿಸಿ ಬ್ರಹ್ಮರಕೂಟ್ಲು ಟೋಲ್‌ಗೆ ಎಸ್‌ಡಿಪಿಐ ಮುತ್ತಿಗೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಬಂಟ್ವಾಳ: ನಿಂತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

ಮಂಗಳೂರು: ಕ್ಲಸ್ಟರ್ ಕಿಚನ್ ವಿರೋಧಿಸಿ ಉಳ್ಳಾಲದಲ್ಲಿ ಬಿಸಿಯೂಟ ನೌಕರರ ಪ್ರತಿಭಟನೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಡಳಿತ ಭಾಷೆಯಾಗಿ ತುಳುವಿಗೆ ಮಾನ್ಯತೆ

ಮಂಗಳೂರು: ಬಂಟ್ವಾಳದಲ್ಲಿ ಅಬಕಾರಿ ದಾಳಿ: 20.37 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತಿ

error: Content is protected !!