ಜನ ಮನದ ನಾಡಿ ಮಿಡಿತ

Advertisement

ಉಡುಪಿ: 80 ಬಡಗುಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ₹3.30 ಕೋಟಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಕಾಪು ವಿಧಾನಸಭಾ ಕ್ಷೇತ್ರದ 80 ಬಡಗುಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು ₹3.30 ಕೋಟಿ ವೆಚ್ಚದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಬುಧವಾರ ಚಾಲನೆ ನೀಡಿದರು.

ಶಾಸಕರ ಶಿಫಾರಸ್ಸಿನ ಮೇರೆಗೆ ₹2.55 ಕೋಟಿ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ ಅವರು, ಈಗಾಗಲೇ ₹75 ಲಕ್ಷ ವೆಚ್ಚದಲ್ಲಿ ಪೂರ್ಣಗೊಂಡ ಕಾಮಗಾರಿಗಳನ್ನು ಉದ್ಘಾಟಿಸಿದರು.

₹75 ಲಕ್ಷ ವೆಚ್ಚದಲ್ಲಿ ಕುಕ್ಕುದಕಟ್ಟೆ ರಸ್ತೆ, ಗೋಪಾಲ ನಾಯಕ್ ಮನೆವರೆಗಿನ ರಸ್ತೆ, ಶಾಂತಿನಗರ ಸಿದ್ಧಿವಿನಾಯಕ ಸ್ಟೋರ್ಸ್ ಬಳಿಯ ರಸ್ತೆ ಹಾಗೂ ರಾಜೀವನಗರ ಅಡ್ಡರಸ್ತೆ ಅಭಿವೃದ್ಧಿಪಡಿಸಲಾಗಿದೆ.

ಇನ್ನು ₹2.55 ಕೋಟಿ ವೆಚ್ಚದಲ್ಲಿ ಆರ್‌ಬಿ ದಶರಥ ನಗರ ರಸ್ತೆ, ರಾಜೀವನಗರ ರಸ್ತೆ, ಆರ್‌ಬಿ ವೈಷ್ಣವಿ ದೇವಸ್ಥಾನ ಸಂಪರ್ಕ ರಸ್ತೆ ಹಾಗೂ ಕಬ್ಯಾಡಿ ಲಕ್ಷ್ಮೀನಾರಾಯಣ ಪ್ರಭು ಮನೆ ಬಳಿಯ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಉಪೇಂದ್ರ ನಾಯಕ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೇಶವ ಕೋಟ್ಯಾನ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ: ಪ್ರತೀಕ್ ಬಾಯಲ್

ಬಂಟ್ವಾಳ: ಬಂಟ್ವಾಳಕ್ಕೆ ಗ್ರಾಮಾಂತರ ಸೈಬರ್ ಪೊಲೀಸ್ ಠಾಣೆ ಸ್ಥಳಾಂತರ

ಬಂಟ್ವಾಳ: ಉಪ್ಪಿನಂಗಡಿ ಟೋಲ್ ವಿರೋಧಿಸಿ ಬ್ರಹ್ಮರಕೂಟ್ಲು ಟೋಲ್‌ಗೆ ಎಸ್‌ಡಿಪಿಐ ಮುತ್ತಿಗೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಬಂಟ್ವಾಳ: ನಿಂತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

ಮಂಗಳೂರು: ಕ್ಲಸ್ಟರ್ ಕಿಚನ್ ವಿರೋಧಿಸಿ ಉಳ್ಳಾಲದಲ್ಲಿ ಬಿಸಿಯೂಟ ನೌಕರರ ಪ್ರತಿಭಟನೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಡಳಿತ ಭಾಷೆಯಾಗಿ ತುಳುವಿಗೆ ಮಾನ್ಯತೆ

ಮಂಗಳೂರು: ಬಂಟ್ವಾಳದಲ್ಲಿ ಅಬಕಾರಿ ದಾಳಿ: 20.37 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತಿ

error: Content is protected !!